alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಚಿಹ್ನೆ ಪ್ರಚಾರಕ್ಕೆ ಸರ್ಕಾರದ ಹಣ ಬಳಸುವಂತಿಲ್ಲ

election-commission-of-india-may16ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಕಟ್ಟುನಿಟ್ಟಿನ ಸೂಚನೆಯೊಂದನ್ನು ನೀಡಿದೆ. ತಮ್ಮ ಚುನಾವಣಾ ಚಿಹ್ನೆಯ ಪ್ರಚಾರಕ್ಕಾಗಿ ಸರ್ಕಾರದ ಹಣ ಸೇರಿದಂತೆ ಇತರೆ ಸರ್ಕಾರಿ ಸೌಲಭ್ಯಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಅಂತಾ ಖಡಕ್ ಆದೇಶ ಹೊರಡಿಸಿದೆ.

ಸಾರ್ವಜನಿಕ ಹಣದಲ್ಲಿ ತಮ್ಮ ಚಿಹ್ನೆ ಬಗ್ಗೆ ಪ್ರಚಾರ ಮಾಡುವ ರಾಜಕೀಯ ಪಕ್ಷಗಳಿಗೆ ಬ್ರೇಕ್ ಹಾಕುವಂತೆ ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬಿಎಸ್ಪಿ, ಸರ್ಕಾರದ ಹಣದಲ್ಲಿ ಪಕ್ಷದ ಚಿಹ್ನೆ ಆನೆಯ ಪ್ರಚಾರಕ್ಕಾಗಿ ಎಲ್ಲಾ ಪಾರ್ಕ್ ಗಳಲ್ಲಿ ಆನೆಯ ಪುತ್ಥಳಿಗಳನ್ನು ನಿರ್ಮಿಸಿತ್ತು.

ಅದನ್ನೆಲ್ಲ ಮುಚ್ಚುವಂತೆ ಆಯೋಗ ಆದೇಶಿಸಿತ್ತು. ಇನ್ನು ಮುಂದೆ ಯಾವುದೇ ಪಕ್ಷದ ಜಾಹೀರಾತು ಅಥವಾ ಚಿಹ್ನೆ ಪ್ರಚಾರಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳಿಗೆ ಸಾರ್ವಜನಿಕ ಹಣ, ಸ್ಥಳ ಮತ್ತು ಸರ್ಕಾರದ ಸೌಲಭ್ಯಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಚುನಾವಣಾ ಆಯೋಗ ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ, ಪ್ರಾದೇಶಿಕ ರಾಜಕೀಯ ಪಕ್ಷಗಳ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಕಳುಹಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...