alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ ಮೊದಲ ದಂಪತಿ

pres

ಮುಂಬೈನ ಮೊಹಮದ್ ಅಬ್ದುಲ್ ಹಮೀದ್ ಪಟೇಲ್ ಹಾಗೂ ಸಾಯಿರಾ ಬಾನು ಭಾರತದ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ ಮೊದಲ ದಂಪತಿ ಎನಿಸಿಕೊಂಡಿದ್ದಾರೆ. ಜುಲೈ 17ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಜುಲೈ 20ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಮೊಹಮದ್ ಮತ್ತು ಅವರ ಪತ್ನಿ ಸಾಯಿರಾ ಬಾನು ಚುನಾವಣೆಯಲ್ಲಿ ಗೆಲ್ಲುವ ಯಾವುದೇ ಸಾಧ್ಯತೆಗಳಿಲ್ಲ. ಆದ್ರೂ ಜೂನ್ 30ರಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಚುನಾವಣೆ ಮುಗಿದ ನಂತರ ಕಾನೂನು ಹೋರಾಟ ನಡೆಸಲು ಮೊಹಮದ್ ಅಬ್ದುಲ್ ನಿರ್ಧರಿಸಿದ್ದಾರೆ.

ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಗೆ ಕನಿಷ್ಟ 100 ಸಂಸದರು ಮತ್ತು ಶಾಸಕರ ಬೆಂಬಲವಿರಬೇಕೆಂಬ ನಿಯಮವಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ಮೊಹಮದ್ ಮುಂದಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹಾಗೂ ರಾಜಕಾರಣಿ ಎನಿಸಿಕೊಂಡಿರುವ ಮೊಹಮ್ಮದ್ 2012ರಲ್ಲೂ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದರು.

ಪತಿ- ಪತ್ನಿ ಇಬ್ಬರೂ ಈ ಹಿಂದೆ ಪುರಸಭೆ ಚುನಾವಣೆಗೆ ನಿಂತು ಸೋತಿದ್ದಾರೆ. ಚಾಯ್ ವಾಲಾ ಪ್ರಧಾನಿಯಾದಂತೆ ನಮ್ಮಂತಹ ಸಾಮಾನ್ಯ ಮನುಷ್ಯರು ಕೂಡ ರಾಷ್ಟ್ರಪತಿಯಾಗಬೇಕು ಎನ್ನುತ್ತಾರೆ ಮೊಹಮ್ಮದ್. ರಾಷ್ಟ್ರಪತಿಯಾಗಿ ಆಯ್ಕೆಯಾದ್ರೆ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸೋದಾಗಿಯೂ ಹೇಳಿಕೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...