alex Certify
ಕನ್ನಡ ದುನಿಯಾ       Mobile App
       

Kannada Duniya

ICU ನಲ್ಲೇ ರೋಗಿಯ ಕೊನೆಯಾಸೆ ಈಡೇರಿಸಿದ ಆಸ್ಪತ್ರೆ

ಪಾಟ್ನಾದ ಏಮ್ಸ್ ಆಸ್ಪತ್ರೆ ಕ್ಯಾನ್ಸರ್ ಪೀಡಿತ ಮಹಿಳೆಯ ಕೊನೆಯಾಸೆ ಈಡೇರಿಸಿದೆ. ಆಕೆ ಚಿಕಿತ್ಸೆ ಪಡೆಯುತ್ತಿದ್ದ ಐಸಿಯು ಹೊರಭಾಗದಲ್ಲೇ ಮಗಳ ಮದುವೆಗೆ ಅವಕಾಶ ಮಾಡಿಕೊಟ್ಟಿದೆ.

ಸರ್ವಿಕಲ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಕೆಯ ಆರೋಗ್ಯ ಸಂಪೂರ್ಣ ಹದಗೆಟ್ಟಿದ್ದರಿಂದ ಐಸಿಯುನಲ್ಲಿದ್ಲು. ಮಗಳ ಮದುವೆ ನೋಡಬೇಕು ಅನ್ನೋದು ಅವಳ ಕೊನೆಯಾಸೆ.

ಏಪ್ರಿಲ್ 18ರಂದು ಮಗಳ ವಿವಾಹ ಕೂಡ ನಿಶ್ಚಯವಾಗಿತ್ತು. ಆದ್ರೆ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅಲ್ಲಿವರೆಗೆ ಆಕೆ ಬದುಕುವುದೇ ಅನುಮಾನ ಎಂದು ವೈದ್ಯರು ತಿಳಿಸಿದ್ದರು.

ಹಾಗಾಗಿ ಐಸಿಯು ಮುಂಭಾಗದಲ್ಲೇ ಹಾರ ಬದಲಾಯಿಸಿಕೊಂಡ ವಧು-ವರರು ಕ್ಯಾನ್ಸರ್ ಪೀಡಿತ ಮಹಿಳೆಯ ಕೊನೆಯ ಆಸೆಯನ್ನು ಈಡೇರಿಸಿದ್ದಾರೆ. ಐಸಿಯುನಲ್ಲಿ ಮಲಗಿಯೇ ಮಹಿಳೆ ಮಗಳು-ಅಳಿಯನಿಗೆ ಆಶೀರ್ವಾದ ಮಾಡಿದ್ದಾಳೆ. ರೋಗಿಯ ಕೊನೆಯಾಸೆ ಈಡೇರಿಸಲು ಅವಕಾಶ ಮಾಡಿಕೊಟ್ಟ ಆಸ್ಪತ್ರೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...