alex Certify
ಕನ್ನಡ ದುನಿಯಾ       Mobile App
       

Kannada Duniya

ಅಯೋಧ್ಯೆ ವಿಚಾರ ‘ತಕ್ಷಣ’ ವಿಚಾರಣೆ ಸಾಧ್ಯವೇ ಇಲ್ಲವೆಂದ ನ್ಯಾಯಾಲಯ

ಅಯೋಧ್ಯೆ ವಿಚಾರ ತುರ್ತು ವಿಚಾರಣೆ ಸಾಧ್ಯವಿಲ್ಲ, ಜನವರಿ‌ ನಂತರವಷ್ಟೆ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರಿಂ ಕೋರ್ಟ್ ಸ್ಪಷ್ಟಪಡಿಸಿದೆ.

ಅಖಿಲ ಭಾರತ ಹಿಂದೂ ಮಹಾಸಭಾ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ನೀಡಿತು. ತುರ್ತಾಗಿ ವಿಚಾರಣೆ ನಡೆಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ ನ್ಯಾಯಾಲಯ ಈ ಕೋರಿಕೆಯನ್ನು ತಳ್ಳಿಹಾಕಿದೆ.

ಜನವರಿ‌ ಮೊದಲ ವಾರದಲ್ಲಿ ವಿಚಾರಣೆ ಆರಂಭಿಸುವುದಾಗಿ ನ್ಯಾಯಾಧೀಶರು ತಿಳಿಸಿದರು. ನಾವು ಈಗಾಗಲೇ ಆದೇಶ ನೀಡಿದಂತೆ, ಜನವರಿಯಲ್ಲಿಯೇ ವಿಚಾರಣೆ ಆರಂಭಿಸುವುದಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್  ಹೇಳಿದ್ದಾರೆ.

ಪ್ರಕರಣದ ವಿಚಾರಣೆ ನಡೆಸುವಂತೆ ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರದ ಕೋರಿಕೆಗೆ ಪ್ರತಿಕ್ರಿಯೆ ನೀಡಿದ್ದ ನ್ಯಾಯಾಲಯ, ಈ ಪ್ರಕರಣಕ್ಕಿಂತ ಬೇರೆ ಮುಖ್ಯ ವಿಚಾರಗಳಿವೆ ಎಂದು ಹೇಳಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...