alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: 85 ರೂಪಾಯಿ ತಲುಪಿದ ಪೆಟ್ರೋಲ್ ಬೆಲೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಗೆ ಅನುಗುಣವಾಗಿ ಭಾರತೀಯ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ನಿಗದಿ ಮಾಡುತ್ತಿದ್ದು, ಇದೇ ಮೊದಲ ಬಾರಿಗೆ ಪೆಟ್ರೋಲ್ ಹಾಗೂ ಡಿಸೇಲ್ ದರ ಅತ್ಯಧಿಕ ಮಟ್ಟವನ್ನು ತಲುಪಿದೆ.

ಪೆಟ್ರೋಲ್ ಬೆಲೆ ಇಂದು ಮುಂಬೈನಲ್ಲಿ 85 ರೂಪಾಯಿ ತಲುಪಿದ್ದು, ಚೆನ್ನೈನಲ್ಲಿ ಪೆಟ್ರೋಲ್ ದರ 80 ರೂಪಾಯಿಯನ್ನು ದಾಟಿದೆ.

ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಕ್ರಮವಾಗಿ 77 ರೂ. ಹಾಗೂ 79 ರೂಪಾಯಿಗೆ ತಲುಪಿದ್ದು, ಇದು ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚಿನ ಬೆಲೆಯಾಗಿದೆ.

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ಪೆಟ್ರೋಲ್ ಬೆಲೆಯಲ್ಲಿ 25 ರೂಪಾಯಿಯನ್ನು ಇಳಿಸಬಹುದು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಟೀಕಿಸಿದ್ದಾರೆ. ಡೀಸೆಲ್ ಬೆಲೆಯೂ ಸಾಕಷ್ಟು ಏರಿಕೆಯಾಗಿದ್ದು, ದೆಹಲಿ, ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈನಲ್ಲಿ ಕ್ರಮವಾಗಿ 68.34 ರೂ.,70.89 ರೂ.,72.76 ರೂ. ಹಾಗೂ 72.14 ರೂಪಾಯಿಗಳಾಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...