alex Certify
ಕನ್ನಡ ದುನಿಯಾ       Mobile App
       

Kannada Duniya

ಶನಿವಾರವೂ ಏರಿಕೆಯಾಯ್ತು ಪೆಟ್ರೋಲ್-ಡಿಸೇಲ್ ಬೆಲೆ

ಶನಿವಾರ ಕೂಡ ತೈಲ ಬೆಲೆಯಲ್ಲಿ ವೃದ್ಧಿಯಾಗಿದೆ. ಶನಿವಾರ ದೇಶದ ನಾಲ್ಕು ಮೆಟ್ರೋ ನಗರಗಳಲ್ಲಿ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್ ಗೆ 80 ರೂಪಾಯಿಯಾಗಿದೆ. ಉಳಿದ ನಗರಗಳಿಗೆ ಹೋಲಿಕೆ ಮಾಡಿದ್ರೆ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಿದೆ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಅಂಕಿ ಪ್ರಕಾರ, ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 77.23 ರೂಪಾಯಿಯಾಗಿದೆ. ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 84.67 ರೂಪಾಯಿಯಿದ್ರೆ ಚೆನ್ನೈನಲ್ಲಿ 80.23 ರೂಪಾಯಿಯಾಗಿದೆ.

ಇನ್ನು ಡಿಸೇಲ್ ಬೆಲೆಯಲ್ಲಿ ಕೂಡ ಶನಿವಾರ ಏರಿಕೆ ಕಂಡು ಬಂದಿದೆ. ದೆಹಲಿಯಲ್ಲಿ ಲೀಟರ್ ಡಿಸೇಲ್ ಬೆಲೆ 68.71 ರೂಪಾಯಿಯಾಗಿದ್ದು, ಕೋಲ್ಕತ್ತಾದಲ್ಲಿ 71.55 ರೂಪಾಯಿಯಾಗಿದೆ. ಮುಂಬೈನಲ್ಲಿ ಡಿಸೇಲ್ ಬೆಲೆ 72.94 ರೂಪಾಯಿಯಿದೆ. ದೆಹಲಿಯಲ್ಲಿ ಉಳಿದ ನಗರಗಳಿಗಿಂತ ಕಡಿಮೆ ಮಾರಾಟ ತೆರಿಗೆ ಇರುವ ಕಾರಣ ಇಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಾಗುವ ಏರುಪೇರಿನಿಂದಾಗಿ ಭಾರತದ ತೈಲ ಬೆಲೆಯಲ್ಲಿ ಬದಲಾವಣೆ ಕಂಡು ಬರ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...