alex Certify
ಕನ್ನಡ ದುನಿಯಾ       Mobile App
       

Kannada Duniya

ಮಧ್ಯ ರಾತ್ರಿಯಿಂದ ಪೆಟ್ರೋಲ್- ಡಿಸೇಲ್ ದರ ಏರಿಕೆ

petrol-price

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ, ಮಧ್ಯಮವರ್ಗದ ಜನ ತತ್ತರಿಸಿರುವಾಗಲೇ ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆಯಲ್ಲಿ ಮತ್ತೊಮ್ಮೆ ಹೆಚ್ಚಳ ಮಾಡಲಾಗಿದೆ. ಅಗತ್ಯ ವಸ್ತು ಬೆಲೆ ದಿನೇ, ದಿನೇ ಏರಿಕೆಯಾಗುತ್ತಿದ್ದು, ಇದರೊಂದಿಗೆ ತೈಲ ಬೆಲೆಯಲ್ಲಿಯೂ ಹೆಚ್ಚಳವಾಗಿದೆ.

ಒಂದೇ ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರೂ. ಏರಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ನೂತನ ದರಗಳು ಜಾರಿಗೆ ಬಂದಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ.

ಭಾರತಕ್ಕೆ ಕಚ್ಛಾತೈಲ ರಫ್ತು ಮಾಡುತ್ತಿದ್ದ ಇರಾಕ್ ತೈಲ ಕಂಪನಿಗಳು ಶುಲ್ಕ ವಿನಾಯಿತಿ ತೆಗೆದುಹಾಕಿದ್ದು, ಇದರಿಂದಾಗಿ ದೇಶೀಯ ತೈಲೋತ್ಪನ್ನ ಸಂಸ್ಥೆಗಳೇ ಶುಲ್ಕ ಪಾವತಿ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.

ಮೇ 1 ರಂದು ಪೆಟ್ರೋಲ್ ಲೀಟರ್ ಗೆ 1.6 ರೂ., ಡೀಸೆಲ್ 2.94 ರೂ. ಏರಿಕೆಯಾಗಿತ್ತು. ಮೇ 17ರಂದು ಪೆಟ್ರೋಲ್ ಲೀಟರ್ ಗೆ 83 ಪೈಸೆ, ಡೀಸೆಲ್ ಲೀಟರ್ ಗೆ 1.26 ರೂ ಏರಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್ 2.58 ರೂ. ಹಾಗೂ ಡೀಸೆಲ್ 2.26 ರೂ. ಏರಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...