alex Certify
ಕನ್ನಡ ದುನಿಯಾ       Mobile App
       

Kannada Duniya

ಕಡಿಮೆಯಾಯ್ತು ಪೆಟ್ರೋಲ್, ದುಬಾರಿಯಾಯ್ತು ಡೀಸೆಲ್

petrole 30

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾದ ಕಾರಣ ದೇಶೀಯ ಮಾರುಕಟ್ಟೆಯಲ್ಲಿಯೂ ಪೆಟ್ರೋಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಅದರೊಂದಿಗೆ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ನೂತನ ದರ ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರಲಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆ ಏರಿಳಿತ ಕಂಡಿರುವುದರಿಂದ ತೈಲಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಿವೆ. ಅದರಂತೆ ಪೆಟ್ರೋಲ್ ಬೆಲೆಯಲ್ಲಿ ಕಡಿಮೆಯಾಗಿ ಲೀಟರ್ ಗೆ 32 ಪೈಸೆ ಇಳಿಕೆ ಮಾಡಲಾಗಿದೆ. ಡೀಸೆಲೆ ಬೆಲೆಯನ್ನು ಲೀಟರ್ ಗೆ 28 ಪೈಸೆ ಏರಿಕೆ ಮಾಡಲಾಗಿದ್ದು, ಮಧ್ಯರಾತ್ರಿಯಿಂದಲೇ ಈ ದರಗಳು ಜಾರಿಗೆ ಬರಲಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಏರಿಳಿತ ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸಲಾಗುತ್ತದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಣನೀಯ ಪ್ರಮಾಣದಲ್ಲಿ ಅಂದರೆ, ಮಿನರಲ್ ವಾಟರ್ ಗಿಂತಲೂ ಕಡಿಮೆ ಬೆಲೆಯಲ್ಲಿ ತೈಲ ಬೆಲೆ ಇಳಿಕೆಯಾದಾಗಲೂ ತೈಲ ಕಂಪನಿಗಳು ಕೇವಲ ಪೈಸೆಗಳ ಲೆಕ್ಕದಲ್ಲಿ ಇಳಿಕೆ ಮಾಡಿದ್ದವು. ಈಗಲೂ ಪೈಸೆಗಳ ಲೆಕ್ಕದಲ್ಲಿ ಇಳಿಕೆ ಮಾಡಲಾಗಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...