alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ಇಳಿಕೆ

petrol-diesel 3446ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಸಂದರ್ಭಗಳಲ್ಲಿ ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರವನ್ನು ಕಡಿಮೆ ಮಾಡುತ್ತಿದ್ದ ತೈಲ ಕಂಪನಿಗಳು, ಏರಿಕೆ ಸಂದರ್ಭದಲ್ಲಿ ರೂಪಾಯಿ ಲೆಕ್ಕದಲ್ಲಿ ಏರಿಕೆ ಮಾಡಿ ಗ್ರಾಹಕರಿಗೆ ಮೇಲೆ ಹೊರೆ ಹೇರುತ್ತಿದ್ದವು.

ಇದೀಗ ಗ್ರಾಹಕರು ಸಂತಸಪಡುವ ಸುದ್ದಿ ಹೊರ ಬಿದ್ದಿದೆ. ಇಂದು ಮಧ್ಯ ರಾತ್ರಿಯಿಂದಲೇ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.25 ರೂಪಾಯಿ ಕಡಿಮೆಯಾಗಿದ್ದು, ವಾಹನ ಸವಾರರು ಬಹು ದಿನಗಳ ಬಳಿಕ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಅದೇ ರೀತಿ ಡಿಸೇಲ್ ದರ ಪ್ರತಿ ಲೀಟರ್ ಗೆ 42 ಪೈಸೆಯಷ್ಟು ಕಡಿಮೆ ಮಾಡಲಾಗಿದೆ.

ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ಈ ಸುದ್ದಿ ಕೊಂಚ ಸಮಾಧಾನ ತಂದಿದೆಯಾದರೂ ಡಿಸೇಲ್ ದರ ಇನ್ನಷ್ಟು ಕಡಿಮೆಯಾಗಿದ್ದರೆ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆಯೂ ಕಡಿಮೆಯಾಗುತ್ತಿತ್ತೆಂಬ ಅಭಿಪ್ರಾಯವೂ ಕೇಳಿ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...