alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಮತ್ತೆ ಶಾಕ್

petrol hike

ನವದೆಹಲಿ: ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದೇ ಕಷ್ಟಸಾಧ್ಯ. ಅದರಲ್ಲಿಯೂ ವಾಹನ ಸವಾರರು ತೈಲ ಬೆಲೆ ಏರಿಕೆಯ ಬಗ್ಗೆ ಗೊಣಗುವುದನ್ನು ಸಾಮಾನ್ಯವಾಗಿ ನೋಡಿರುತ್ತೀರಾ. ಗಾಯದ ಮೇಲೆ ಬರೆ ಎಳೆದಂತೆ ತೈಲ ಬೆಲೆಯಲ್ಲಿ ಮತ್ತೆ ಹೆಚ್ಚಳ ಮಾಡಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಯನ್ನು ಆಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲಕಂಪನಿಗಳು ಪರಿಷ್ಕರಿಸಿದ್ದು, ಪೆಟ್ರೋಲ್ ಬೆಲೆ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 1.06 ರೂಪಾಯಿ ಏರಿಕೆ ಮಾಡಲಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 2.94 ರೂ. ಹೆಚ್ಚಳ ಮಾಡಲಾಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಪರಿಷ್ಕೃತ ದರಗಳು ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿವೆ. ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿತ್ತು. ಆದರೆ, ಏರಿಕೆ ಮಾಡುವಾಗ ಪೆಟ್ರೋಲ್ ಗೆ 1.06 ರೂ. ಹಾಗೂ ಡೀಸೆಲ್ ಗೆ 2.94 ರೂ.ಹೆಚ್ಚಳ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...