alex Certify
ಕನ್ನಡ ದುನಿಯಾ       Mobile App
       

Kannada Duniya

ಪೆಟ್ರೋಲ್- ಡಿಸೇಲ್ ಬೆಲೆ ಇಳಿಕೆ ಕೇಳಿದ್ರೆ ನಕ್ಕು ಬಿಡ್ತೀರಿ!

petrol 124568

ನವದೆಹಲಿ: ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯನ್ನಾಧರಿಸಿ, ದೇಶೀಯ ಮಾರುಕಟ್ಟೆಯಲ್ಲಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಬೆಲೆ ಇಳಿಕೆ ಮಾಡಲಾಗಿದೆ. ಪರಿಷ್ಕೃತ ದರಗಳ ಅನ್ವಯ ತೈಲಗಳ ಬೆಲೆಯನ್ನು ತೀರಾ ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದೆ.

ಪೆಟ್ರೋಲ್ ಲೀಟರ್ ಗೆ 4 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 3 ಪೈಸೆಯಷ್ಟು ಇಳಿಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೈಸೆಗಳ ಲೆಕ್ಕದಲ್ಲಿ ಇಳಿಸಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಎರಡು ವಾರಗಳಲ್ಲಿ ಕಚ್ಛಾ ತೈಲ ಬೆಲೆ ಪ್ರತಿ ಬ್ಯಾರಲ್ ಗೆ ಸುಮಾರು 270 ರೂಪಾಯಿಯಷ್ಟು ಇಳಿಕೆಯಾಗಿದ್ದರೂ, ತೈಲ ಕಂಪನಿಗಳು ಪೈಸೆಗಳ ಲೆಕ್ಕದಲ್ಲಿ ಇಳಿಕೆ ಮಾಡಿವೆ ಎಂದು ದೂರಲಾಗಿದೆ.

ಕೇಂದ್ರ ಸರ್ಕಾರ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಮಾಡುವ ಅವಕಾಶ ಇದ್ದರೂ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಇಳಿಕೆ ಮಾಡದೇ, ಆಗಾಗ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಿದೆ. ಭಾನುವಾರವಷ್ಟೇ ಪೆಟ್ರೋಲ್ ಗೆ 1 ರೂ., ಡೀಸೆಲ್ ಗೆ 1.50 ರೂ ಅಬಕಾರಿ ಸುಂಕ ವಿಧಿಸಲಾಗಿತ್ತು. ದರ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಣನೀಯ ಇಳಿಕೆಯಾಗುತ್ತಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...