alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೊಂದು ಸಂತಸದ ಸುದ್ದಿ !

Fuel-prices-to-go-down

ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಜೀವನ ನಡೆಸುವುದೇ ಕಷ್ಟಸಾಧ್ಯ. ಅದರಲ್ಲಿಯೂ ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯ ದಿನಗಳಲ್ಲಿ ಗೊಣಗುವುದನ್ನು ಸಾಮಾನ್ಯವಾಗಿ ನೋಡಿರುತ್ತೀರಾ. ಇದೀಗ ವಾಹನ ಸವಾರರಿಗೆ ಖುಷಿಯ ವಿಚಾರ ಇಲ್ಲಿದೆ ನೋಡಿ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಯನ್ನು ಆಧರಿಸಿ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲಕಂಪನಿಗಳು ಪರಿಷ್ಕರಿಸಿದ್ದು, ಪೆಟ್ರೋಲ್ ಬೆಲೆ ಕಡಿಮೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯನ್ನು 3.02 ರೂಪಾಯಿ ಇಳಿಕೆ ಮಾಡಲಾಗಿದೆ. ಅದೇ ರೀತಿ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು ಪ್ರತಿ ಲೀಟರ್ ಡೀಸೆಲ್ ಬೆಲೆ 1.47 ರೂಪಾಯಿ ಏರಿಕೆ ಮಾಡಲಾಗಿದೆ.

ಪೆಟ್ರೋಲ್ ಹಾಗೂ ಡೀಸೆಲ್ ಪರಿಷ್ಕೃತ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೈಸೆಗಳ ಲೆಕ್ಕದಲ್ಲಿ ಮಾತ್ರ ಇಳಿಕೆ ಮಾಡಲಾಗಿತ್ತು. ಇದೀಗ ಪೆಟ್ರೋಲ್ 3.02 ರೂ. ಇಳಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...