alex Certify
ಕನ್ನಡ ದುನಿಯಾ       Mobile App
       

Kannada Duniya

ವಾಹನ ಸವಾರರಿಗೆ ಮತ್ತೊಮ್ಮೆ ಬ್ಯಾಡ್ ನ್ಯೂಸ್

pet

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಜನಸಾಮಾನ್ಯರು ತತ್ತರಿಸಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಇಂದು ಮಧ್ಯ ರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

 

ಪೆಟ್ರೋಲ್ ಲೀಟರ್ ಗೆ 0.5 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 1.26 ರೂ. ಏರಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಕಳೆದ 45 ದಿನಗಳ ಅವಧಿಯಲ್ಲಿ 3 ನೇ ಬಾರಿಗೆ ತೈಲ ಬೆಲೆಯಲ್ಲಿ ಏರಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ ಈ ಅವಧಿಯಲ್ಲಿ 4.78 ರೂ. ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಆಧರಿಸಿ ತೈಲ ಕಂಪನಿಗಳು ದೇಶೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯನ್ನು ಪರಿಷ್ಕರಿಸುತ್ತವೆ. ಅಲ್ಲಿ ಬೆಲೆ ಏರಿಕೆ ಕಾರಣದಿಂದ ದೇಶೀಯ ಮಾರುಕಟ್ಟೆಯಲ್ಲಿಯೂ ಹೆಚ್ಚಳವಾಗಿದೆ ಎನ್ನಲಾಗಿದೆ.

 

ಕಳೆದ 45 ದಿನಗಳಲ್ಲಿ 3 ನೇ ಬಾರಿಗೆ ತೈಲ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಲೀಟರ್ ಗೆ 0.5 ಪೈಸೆ, ಡೀಸೆಲ್ ಬೆಲೆಯಲ್ಲಿ 1.26 ರೂ. ಏರಿಕೆ ಮಾಡಲಾಗಿದ್ದು, ಬುಧವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿರುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...