alex Certify
ಕನ್ನಡ ದುನಿಯಾ       Mobile App
       

Kannada Duniya

ನೆರವಿಗೆ ಮೊರೆಯಿಟ್ಟು ಕಣ್ಣೀರಿಟ್ಟ ಕೇರಳ ಶಾಸಕ

ತಿರುವಂತಪುರ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳಕ್ಕೆ ಇನ್ನಷ್ಟು ಹೆಲಿಕಾಪ್ಟರ್‌ ಕಳಿಸಲು ತಿಳಿಸಿ. ಹೆಲಿಕಾಪ್ಟರ್‌ಗಳಷ್ಟೇ ನಮ್ಮನ್ನು ಉಳಿಸಲು ಸಾಧ್ಯ… ಕೇರಳದ ಚೆಂಗನ್ನೂರು ಶಾಸಕ ಸಜಿ ಚೆರಿಯನ್‌ ಸುದ್ದಿಗಾರರ ಮೂಲಕ ಸಲ್ಲಿಸಿದ ಮನವಿ ಇದು.

ತಿರುವನಂತಪುರದಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಚೆಂಗನ್ನೂರಿನಲ್ಲಿ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಅಲ್ಲಿ ಎಷ್ಟು ಜನ ಸಿಲುಕಿದ್ದಾರೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಯಾವುದೇ ಮಾಹಿತಿ ಇಲ್ಲವಾಗಿದೆ. ಯಾವ ಭಾಗಗಳಿಂದಲೂ ಚೆಂಗನ್ನೂರಿಗೆ ತಲುಪುವುದು ಅಸಾಧ್ಯವಾಗಿದೆ. ಹೆಲಿಕಾಪ್ಟರ್‌ ಮೂಲಕ ಮಾತ್ರವೇ ಅಲ್ಲಿರುವವರನ್ನು ಬದುಕಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಹೆಲಿಕಾಪ್ಟರ್‌ಗಳನ್ನು ಕಳುಹಿಸಲಿ ಎಂದು ಕಣ್ಣೀರಿಟ್ಟಿದ್ದಾರೆ. ಮೀನುಗಾರರ ದೋಣಿಗಳಲ್ಲಿ ಕೆಲವರನ್ನು ರಕ್ಷಿಸಲಾಗಿದೆ. ಆದರೆ ಇದರಿಂದ ತ್ವರಿತ ಕಾರ್ಯಾಚರಣೆ ಅಸಾಧ್ಯ ಎಂದು ಅವರು ಹೇಳಿದ್ದಾರೆ.

ಸೇನಾಪಡೆ, ವಾಯುಪಡೆ ಹಾಗೂ ನೌಕಾದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕೇರಳದಲ್ಲಿ ಹಗಲಿರುಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕೇರಳದ 14 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. 38 ಹೆಲಿಕಾಪ್ಟರ್‌, 400 ಬೋಟ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ, ರಾಷ್ಟ್ರೀಯ ವಿಕೋಪ ಎಂದು ಪರಿಗಣಿಸಿ 500 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...