alex Certify
ಕನ್ನಡ ದುನಿಯಾ       Mobile App
       

Kannada Duniya

ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ, ಇಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ.

ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದ 93 ವರ್ಷದ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಪರಿಸ್ಥಿತಿಯಲ್ಲಿ ಕೊಂಚ ಏರುಪೇರಾಗಿದ್ದ ಕಾರಣ ವೈದ್ಯರ ಸೂಚನೆಯಂತೆ ಅವರನ್ನು ದೈನಂದಿನ ತಪಾಸಣೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ವಿಚಾರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...