alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿ ಮೋದಿ ಗುಜರಾತ್ ಪ್ರವಾಸ

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಪ್ರಕಟವಾಗಿಲ್ಲ. ಆಗ್ಲೇ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಶುರುಮಾಡಿವೆ. ಕಾಂಗ್ರೆಸ್ ಗುಜರಾತ್ ವಿಧಾನಸಭೆಯನ್ನು ತನ್ನ ಕೈವಶ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದರೆ ಬಿಜೆಪಿ ತನ್ನ ಆಡಳಿತವನ್ನು ಉಳಿಸಿಕೊಳ್ಳುವ ಶತಪ್ರಯತ್ನ ನಡೆಸ್ತಿದೆ. ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ.

ಗಾಂಧಿನಗರಕ್ಕೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್ ಗೌರವ್ ಮಹಾಸಮ್ಮೇಳನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದೇ ತಿಂಗಳಲ್ಲಿ ಪ್ರಧಾನ ಮಂತ್ರಿ ನಾಲ್ಕನೇ ಬಾರಿ ಗುಜರಾತ್ ಗೆ ಪ್ರವಾಸ ಮಾಡ್ತಿರೋದು ವಿಶೇಷವಾಗಿದೆ. ಪ್ರಧಾನ ಮಂತ್ರಿ ಗುಜರಾತ್ ಚುನಾವಣೆ ತಯಾರಿ ಬಗ್ಗೆ ಬಿಜೆಪಿ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಉಪಸ್ಥಿತರಿರಲಿದ್ದಾರೆ.

ಗಾಂಧಿ ಜಯಂತಿಯಂದು ಗುಜರಾತಿನಲ್ಲಿ ಗೌರವ್ ಯಾತ್ರೆಗೆ ಚಾಲನೆ ನೀಡಲಾಗಿತ್ತು. ಈ ವೇಳೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು. 16 ದಿನಗಳ ಕಾಲ ಈ ಯಾತ್ರೆ ನಡೆದಿತ್ತು. ಯಾತ್ರೆ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಮೋದಿ ಇದಕ್ಕೂ ಮುನ್ನ ಟ್ವೀಟರ್ ಮಾಡಿ ಗುಜರಾತ್ ಗೌರವ್ ಯಾತ್ರೆ ಜನಶಕ್ತಿ ಯಾತ್ರೆಯಾಗಿ ಹೊರಹೊಮ್ಮಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...