alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯಿಂದ ‘ಅಚ್ಛೇ ದಿನ’ ವೆಂದ ಸೌದಿ ಸಚಿವ…!

ಭಾರತದ ಪ್ರಜೆಗಳಿಗೆ ನೀಡಿದ್ದ ವಚನದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇದಿನವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೌದಿ ಅರೇಬಿಯಾದ ಇಂಧನ, ಕೈಗಾರಿಕೆ ಮತ್ತು ಜಲ ಸಂಪನ್ಮೂಲ ಸಚಿವ ಖಾಲಿದ್ ಎ. ಅಲ್-ಫಲೀಹ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮೋದಿ ಮುಂದಾಳತ್ವ ವಹಿಸಿಕೊಂಡ ಮೇಲೆ ಭಾರತದಲ್ಲಿ ಉದ್ಯಮ ಸ್ಥಾಪಿಸುವುದು ಈಗ ಬಹಳ ಸರಳವಾಗಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಅಲ್ಲದೆ, ಹಣದುಬ್ಬರವೂ ಹಿಡಿತಕ್ಕೆ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಇಂಧನ ಸಭೆಯಲ್ಲಿ ಮಾತನಾಡಿದ ಅವರು, ಎಲೆಕ್ಟ್ರಿಕ್ ಹಾಗೂ ಸೋಲಾರ್ ವಾಹನಗಳ ಬಳಕೆಯನ್ನು ಹೆಚ್ಚು ಮಾಡುತ್ತೇವೆಂಬುದು ತಪ್ಪು ನಿರ್ಧಾರ. ಕಾರಣ, ವಿಶ್ವ ಇಂಧನ ಮಾರುಕಟ್ಟೆ ಮೇಲೆ ಪರಿಣಾಮ ತೀವ್ರ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದ್ದಾರೆ.

ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸೌದಿ ಸಚಿವ, ಭಾರತದ ತೈಲ ಬೇಡಿಕೆ ಪೂರೈಕೆ ಹಾಗೂ ಹೂಡಿಕೆ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೆ, ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ವೃದ್ಧಿ ಮಾಡುವುದಾಗಿಯೂ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...