alex Certify
ಕನ್ನಡ ದುನಿಯಾ       Mobile App
       

Kannada Duniya

‘ಮಿಶನ್ ಭಗೀರಥ’ ಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

pm-modi-opens-40-thousand-crore-drinking-water-project-in-telangana

ತೆಲಂಗಾಣದ ಮೇಡಕ್ ಜಿಲ್ಲೆಯ ಕೋಮತಿಬಂದಾದ ಹಳ್ಳಿಯ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ‘ಮಿಶನ್ ಭಗೀರಥ’ ಭಾನುವಾರದಂದು ಚಾಲನೆಗೊಂಡಿದೆ.

ಪ್ರಧಾನಿ ಮೋದಿ ಅವರು ಒಂದು ನಲ್ಲಿ ತಿರುಗಿಸಿ ನೀರನ್ನು ಬಿಡುವ ಮೂಲಕ ಈ ಯೋಜನೆಯ ಶುಭಾರಂಭ ಮಾಡಿದ್ದಾರೆ. ಒಟ್ಟು 40 ಸಾವಿರ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಮೊದಲ ಹಂತದಲ್ಲಿ ಗಾಜೇವಾಲದ 240 ಕ್ಕೂ ಹೆಚ್ಚಿನ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ.

ಈ ಉದ್ಘಾಟನಾ ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್, ರಾಜ್ಯಪಾಲ ಈ.ಎಸ್.ಎಲ್. ನರಸಿಂಹನ್, ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು, ಬಂಡಾರೂ ದತ್ತಾತ್ರೇಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...