alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಪ್ರಚಾರದ ವೇಳೆ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ

ಛತ್ತೀಸ್ ಘಡ ವಿಧಾನಸಭಾ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಧಿಕಾರದ ಗದ್ದುಗೆ ಹಿಡಿಯಲು ಪ್ರಮುಖ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಇಂದು ಅಂಬಿಕಾಪುರದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಕಾರ್ಯಕ್ರಮದ ಆರಂಭದಲ್ಲಿ ವೇದಿಕೆಯ ಮೇಲೆ ಸಾಂಪ್ರದಾಯಿಕವಾಗಿ ಡೊಳ್ಳು ಬಾರಿಸುವ ಮೂಲಕ ನೆರೆದ ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿದ್ದಾರೆ.

ನರೇಂದ್ರ ಮೋದಿಯವರು ಡೊಳ್ಳು ಬಾರಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನಸ್ತೋಮ ಚಪ್ಪಾಳೆ ತಟ್ಟಿ ಸಂಭ್ರಮಿಸಿದೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...