alex Certify
ಕನ್ನಡ ದುನಿಯಾ       Mobile App
       

Kannada Duniya

ಕಲಾಪಕ್ಕೂ ಮುನ್ನ ಗೆಲುವಿನ ಸಂಕೇತ ತೋರಿದ ಮೋದಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗ್ತಿದೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಈ ಮಧ್ಯೆ ಸಂಸತ್ ಭವನ ಪ್ರವೇಶಕ್ಕೂ ಮುನ್ನ ಮಾಧ್ಯಮಗಳಿಗೆ ಕೈ ಬೀಸಿದ ಮೋದಿ ಗೆಲುವಿನ ಸಂಕೇತ ತೋರಿಸಿದ್ದಾರೆ.

ಗುಜರಾತ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ರೆ ಇದು ಬಿಜೆಪಿಯ ನಿರಂತರ ನಾಲ್ಕನೇ ಗೆಲುವಾಗಲಿದೆ. ಉತ್ತರ ಪ್ರದೇಶ, ಗೋವಾ, ಮಣಿಪುರ್ ನಲ್ಲಿ ಈಗಾಗಲೇ ಬಿಜೆಪಿ ಸರ್ಕಾರ ರಚನೆಯಾಗಿದೆ. ಇದ್ರ ಜೊತೆಗೆ ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ.

ಗುಜರಾತ್ ಬಿಜೆಪಿ ಕೈಬಿಟ್ಟು ಹೋಗುವ ಸಾಧ್ಯತೆ ಚುನಾವಣೆಗೂ ಮುನ್ನ ವ್ಯಕ್ತವಾಗ್ತಿತ್ತು. ಹಾಗಾಗಿಯೇ ಗುಜರಾತ್ ಚುನಾವಣಾ ಕಣಕ್ಕೆ ನರೇಂದ್ರ ಮೋದಿ ಧುಮುಕಿದ್ದರು. ಗುಜರಾತ್ ನಲ್ಲಿ 30ಕ್ಕೂ ಹೆಚ್ಚು ರ್ಯಾಲಿಗಳನ್ನು ನಡೆಸಿದ್ದರು. ಗುಜರಾತ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದೇ ಆದಲ್ಲಿ ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿರಲಿದೆ. ಕಾಂಗ್ರೆಸ್ ಕೈನಲ್ಲಿ ಕೇವಲ ನಾಲ್ಕು ರಾಜ್ಯಗಳಾದ ಕರ್ನಾಟಕ, ಪಂಜಾಬ್, ಮಿಜೋರಾಂ ಹಾಗೂ ಮೇಘಾಲಯವಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...