alex Certify
ಕನ್ನಡ ದುನಿಯಾ       Mobile App
       

Kannada Duniya

ನೇಪಾಳದಲ್ಲಿನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ ಟೀಕೆ

ಪ್ರಧಾನಿ ನರೇಂದ್ರ ಮೋದಿ ನೇಪಾಳ ಪ್ರವಾಸದಲ್ಲಿದ್ದು, ಅವರು ಅಲ್ಲಿನ ಮುಕ್ತಿನಾಥ್ ದೇವಾಲಯಕ್ಕೆ ಭೇಟಿ ನೀಡಿರೋದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದಾಗ ಮೋದಿ ನೇಪಾಳದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡ್ತಿರೋದು ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗಿದೆ. ಕರ್ನಾಟಕದ ಮತದಾರರ ಮೇಲೆ ಪ್ರಭಾವ ಬೀರಲು ನೇಪಾಳದ ದೇವಾಲಯಗಳಲ್ಲಿ ಪ್ರಾರ್ಥಿಸುತ್ತಿದ್ದಾರೆ. ಕರ್ನಾಟಕ ಚುನಾವಣೆಯ ದಿನಾಂಕದಂದೇ ಅವರು ಯಾಕೆ ದೇವಾಯಕ್ಕೆ ಭೇಟಿ ನೀಡಿದ್ರು. ಇದು ಪ್ರಜಾಪ್ರಭುತ್ವದ ಉತ್ತಮ ಬೆಳವಣಿಗೆಯಲ್ಲ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಇಂಡೋ-ನೇಪಾಳ ಸಂಬಂಧಗಳನ್ನು ಬಲಪಡಿಸಲು ಎರಡು ದಿನಗಳ ಕಾಲ ನೇಪಾಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮುಕ್ತಿನಾಥ್ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ರು. ಹಾಗೆಯೆ ಸಮುದ್ರ ಮಟ್ಟದಿಂದ 3,710 ಮೀಟರ ಎತ್ತರದಲ್ಲಿರುವ ಮಸ್ತಂಗ ಜಿಲ್ಲೆಯಲ್ಲಿನ ಚಿನ್ನದ ವಿಷ್ಣು ಪ್ರತಿಮೆಗೆ ಪೂಜೆ ಸಲ್ಲಿಸಿದ್ರು. ನಂತರ ಕಠ್ಮುಂಟಡುವಿನಲ್ಲಿರುವ ಪಶುಪತಿ ದೇವಾಲಯಕ್ಕೂ ಭೇಟಿ ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...