alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಧ್ಯಮಗಳು ಸಮಾಜ ಬದಲಾಯಿಸುವ ಶಕ್ತಿ ಹೊಂದಿವೆ– ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮಿಳುನಾಡು ಪ್ರವಾಸದಲ್ಲಿದ್ದಾರೆ. ಚೆನ್ನೈನಲ್ಲಿ ತಮಿಳು ದಿನಪತ್ರಿಕೆಯೊಂದರ ಅಮೃತ ಮಹೋತ್ಸವ ಸಮಾರಂಭದಲ್ಲಿ ಮೋದಿ ಭಾಗಿಯಾಗಿದ್ದಾರೆ. ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಪಾಲ್ಗೊಂಡಿರುವ ಮೋದಿ ಭಾರತದ ಪತ್ರಿಕೆಗಳ ಬಗ್ಗೆ ಮಾತನಾಡಿದ್ದಾರೆ. ಪತ್ರಿಕೆಗಳು ಕೇವಲ ಸುದ್ದಿಯನ್ನು ನೀಡೋದಿಲ್ಲ. ಅವು ನಮ್ಮ ಯೋಚನೆಯನ್ನು ಬದಲಾಯಿಸುತ್ತವೆ. ಸಮಾಜವನ್ನು ಬದಲಾಯಿಸುವ ಶಕ್ತಿ ಮಾಧ್ಯಮಗಳಿಗಿವೆ ಎಂದು ಮೋದಿ ಹೇಳಿದ್ದಾರೆ.

ಮಾಧ್ಯಮ ನಮ್ಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ.ಭಾರತೀಯ ಮಾಧ್ಯಮಗಳಿಗೆ ಬ್ರಿಟಿಷ್ ಸರ್ಕಾರ ಹೆದರಿತ್ತು ಎಂದು ಮೋದಿ ಹೇಳಿದ್ದಾರೆ. ಮಾಧ್ಯಮಗಳಲ್ಲಿ ನಡೆಯುತ್ತಿರುವ ಸ್ಪರ್ಧೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಎಂದಿದ್ದಾರೆ.

ಸಮಾರಂಭಕ್ಕೂ ಮುನ್ನ ತಮಿಳುನಾಡು ಮುಖ್ಯ ಮಂತ್ರಿ ಹಾಗೂ ಉಪಮುಖ್ಯಮಂತ್ರಿಯನ್ನು ಮೋದಿ ಭೇಟಿಯಾಗಿದ್ದಾರೆ. ಮಳೆ ಹಾಗೂ ಬೆಳೆ ಹಾನಿಗಳ ಬಗ್ಗೆ ಮುಖ್ಯಮಂತ್ರಿಗಳಿಂದ ಪಿಎಂ ಮಾಹಿತಿ ಪಡೆದಿದ್ದಾರೆ. ಮಳೆ ಹಾನಿಯಿಂದ ತತ್ತರಿಸಿರುವ ಜನಕ್ಕೆ ಕೇಂದ್ರ ಸಂಪೂರ್ಣ ನೆರವು ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಕಾರ್ಯಕ್ರಮದ ನಂತ್ರ ಮೋದಿ ಮಾಜಿ ಸಿಎಂ ಕರುಣಾನಿಧಿಯವರನ್ನು ಭೇಟಿಯಾಗುವ ಸಾಧ್ಯತೆಯಿದೆ. ಕರುಣಾನಿಧಿ ಆರೋಗ್ಯದಲ್ಲಿ ಏರುಪೇರಾಗ್ತಿದೆ. 2016ರ ನಂತ್ರ ಮೂರ್ನಾಲ್ಕು ಬಾರಿ ಕರುಣಾನಿಧಿ ಆಸ್ಪತ್ರೆಗೆ ಹೋಗಿ ಬಂದಿದ್ದಾರೆ. ಕರುಣಾನಿಧಿಯವರನ್ನು ಭೇಟಿಯಾಗಲಿರುವ ಮೋದಿ ಅವರ ಆರೋಗ್ಯ ವಿಚಾರಿಸಲಿದ್ದಾರೆ. ಸದ್ಯ ತಮಿಳುನಾಡಿನ ರಾಜಕೀಯದಲ್ಲಿಯೂ ಸಾಕಷ್ಟು ಬದಲಾವಣೆಯಾಗಿದ್ದು, ಈ ಮಧ್ಯೆ ಕರುಣಾನಿಧಿ-ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...