alex Certify
ಕನ್ನಡ ದುನಿಯಾ       Mobile App
       

Kannada Duniya

ಮುನಿಸು ಮರೆತು ಹಸ್ತಲಾಘವ ಮಾಡಿದ ಹಾಲಿ-ಮಾಜಿ ಪ್ರಧಾನಿಗಳು….

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ಮುಖಾಮುಖಿಯಾಗಿದ್ದರು. ಇಬ್ಬರು ನಾಯಕರು ಪರಸ್ಪರ ನಮಸ್ಕರಿಸಿ, ಹಸ್ತಲಾಘವ ಕೂಡ ಮಾಡಿದ್ದಾರೆ. 2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ನಮನ ಸಲ್ಲಿಸಲು ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಸಂಸತ್ ಹೊರಭಾಗದಲ್ಲಿ ಮೋದಿ ಹಾಗೂ ಮನಮೋಹನ್ ಸಿಂಗ್ ಭೇಟಿಯಾಗಿದ್ದಾರೆ. ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಮನಮೋಹನ್ ಸಿಂಗ್ ವಿರುದ್ಧ ಆರೋಪ ಮಾಡಿದ್ದರು.

ಗುಜರಾತ್ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲು ಕಾಂಗ್ರೆಸ್, ಪಾಕಿಸ್ತಾನದೊಂದಿಗೆ ಸೇರಿ ಷಡ್ಯಂತ್ರ ರಚಿಸಿದೆ. ಪಾಕಿಸ್ತಾನದ ಅತಿಥಿಗಳೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಇತರ ಕಾಂಗ್ರೆಸ್ ನಾಯಕರು ಭೋಜನ ಕೂಟದಲ್ಲಿ ಪಾಲ್ಗೊಂಡು ಈ ಬಗ್ಗೆ ಚರ್ಚಿಸಿದ್ದಾರೆ ಅಂತಾ ಆರೋಪ ಮಾಡಿದ್ದರು. ಮೋದಿ ಹೇಳಿಕೆ ಬಗ್ಗೆ ಕಾಂಗ್ರೆಸ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮನಮೋಹನ್ ಸಿಂಗ್ ಕೂಡ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದ್ರೆ ಆ ಮುನಿಸನ್ನು ಮರೆತು ಇಬ್ಬರು ನಾಯಕರು ಹಸ್ತಲಾಘವ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...