alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾತಂತ್ರ್ಯ ದಿನದಂದು ದೇಶದ ಜನರಿಗೆ ಸಿಗಲಿದೆಯಾ ಸಿಹಿ ಸುದ್ದಿ?

ಸ್ವಾತಂತ್ರ ದಿನದಂದು ಪ್ರಧಾನಿ ಮೋದಿಯವರು ಮಾಡುವ ಭಾಷಣದ ವೇಳೆ, ದೇಶದ ಜನರಿಗೆ ಅನುಕೂಲವಾಗುವ ಹಲವು ಮಹತ್ವದ ಘೋಷಣೆಗಳನ್ನು ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ನಿರೀಕ್ಷೆ ಹೆಚ್ಚಾಗಿದೆ.

ಪ್ರಮುಖವಾಗಿ ಪ್ರಧಾನಮಂತ್ರಿ ಜನ ಧನ್ ಯೋಜನೆಯ ಖಾತೆದಾರರಿಗೆ ಈಗಿರುವ ಓವರ್ ಡ್ರಾಫ್ಟ್ ಸೌಲಭ್ಯವನ್ನು 5 ಸಾವಿರ ರೂ. ಗಳಿಂದ 10 ಸಾವಿರ ರೂ. ಗಳಿಗೆ ಏರಿಕೆಯಾಗುವ ಸಾಧ್ಯತೆ ಇದೆ.

ಅಟಲ್ ಪಿಂಚಣಿ ಯೋಜನೆಯ ಗರಿಷ್ಠ ಮಿತಿಯ ಶ್ರೇಣಿಯನ್ನು ಏರಿಕೆ ಮಾಡುವ ಸಾಧ್ಯತೆ ಇದ್ದು, ಪ್ರಸಕ್ತ 5 ಸಾವಿರ ರೂ. ಗಳಿಂದ 10 ಸಾವಿರ ರೂ. ಗಳಿಗೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.

ಅಲ್ಲದೆ ರುಪೇ ಕಾರ್ಡ್ ದಾರರ ಅಪಘಾತ ವಿಮೆ ಮೊತ್ತವನ್ನು ಒಂದು ಲಕ್ಷ ರೂ. ಗಳಿಗೆ ಹೆಚ್ಚಳ ಮಾಡುವ ಕುರಿತು ಮೋದಿಯವರು ಸ್ವಾತಂತ್ರ ದಿನದಂದು ಘೋಷಣೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜೊತೆಗೆ ಜನಸಾಮಾನ್ಯರಿಗೆ ಅನುಕೂಲವಾಗುವ ಕೆಲ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...