alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ನಲ್ಲಿ ಮೋದಿ ಭರ್ಜರಿ ರ್ಯಾಲಿ : ಮತ್ತೆ ದೇವಸ್ಥಾನಕ್ಕೆ ರಾಹುಲ್ ಭೇಟಿ

ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ಚುನಾವಣಾ ಪ್ರಚಾರ ಚುರುಕುಗೊಂಡಿದೆ. ಶನಿವಾರ ಕಾಂಗ್ರೆಸ್-ಬಿಜೆಪಿ ದಿಗ್ಗಜ ನಾಯಕರು ಯುದ್ಧ ಕಣಕ್ಕೆ ಧುಮುಕಿ ಮತ ಯಾಚನೆ ಮಾಡಿದ್ರು. ಇಂದು ಕೂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ರ್ಯಾಲಿ ಶುರುಮಾಡಲಿರುವ ಮೋದಿ ಸಂಜೆ 6 ಗಂಟೆಯವರೆಗೆ ನಿರಂತರವಾಗಿ ಪ್ರಚಾರ ಮಾಡಲಿದ್ದಾರೆ. ಇಂದು ಒಟ್ಟೂ ನಾಲ್ಕು ರ್ಯಾಲಿಗಳನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

ಇತ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯ ಶುರುಮಾಡಲಿದ್ದಾರೆ. ಖೇಡಾ ಜಿಲ್ಲೆಯ ಡಾಕೋರ್ ನ ಡಂಕಾನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಪೂಜೆ-ಅರ್ಚನೆ ನಂತ್ರ ಪ್ರಚಾರ ಶುರುಮಾಡಲಿದ್ದಾರೆ.

ರಾಹುಲ್ ಗಾಂಧಿ ಇಂದು ಗಾಂಧಿನಗರ ಸೇರಿದಂತೆ ನಾಲ್ಕು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಿದ್ದಾರೆ.

ಗುಜರಾತ್ ಮೊದಲ ಹಂತದ ಮತದಾನ ಡಿಸೆಂಬರ್ 9ರಂದು ನಡೆದಿದ್ದು, ಶೇಕಡಾ 68ರಷ್ಟು ಮತದಾನವಾಗಿದೆ. ಎರಡನೇ ಹಂತದ ಮತದಾನ ಡಿಸೆಂಬರ್ 14ರಂದು ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...