alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ 7 ತಿಂಗಳಲ್ಲಿ 10 ದೇಶ ಸುತ್ತಲಿದ್ದಾರೆ ಮೋದಿ

modi_srilanka_760_1495442310_749x421

ಈ ವರ್ಷ ಮುಗಿಯಲು ಇನ್ನೂ 7 ತಿಂಗಳು ಬಾಕಿ ಇದೆ. ಈ ಏಳು ತಿಂಗಳಲ್ಲಿ 10 ದೇಶಗಳಿಗೆ ಭೇಟಿಯಾಗಲಿದ್ದಾರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ ಸಂಭ್ರಮಾಚರಣೆ ನಂತ್ರ ಪ್ರಧಾನ ಮಂತ್ರಿ ಪ್ರವಾಸ ಶುರು ಮಾಡಲಿದ್ದಾರೆ.

ಪ್ರಧಾನ ಮಂತ್ರಿ ಮೋದಿ ತಮ್ಮ ಮುಂದಿನ ಪ್ರಯಾಣವನ್ನು ಮೇ 29 ರಿಂದ ಶುರು ಮಾಡಲಿದ್ದಾರೆ. ಮೊದಲ ಹಂತದಲ್ಲಿ ಮೋದಿ ಸ್ಪೇನ್, ಜರ್ಮನಿ, ರಷಿಯಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ ನಲ್ಲಿ ಜೂನ್ ಒಂದರಿಂದ ಮೂರರವರೆಗೆ ನಡೆಯಲಿರುವ ಅಂತರರಾಷ್ಟ್ರೀಯ ಆರ್ಥಿಕ ವೇದಿಕೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.

ರಶಿಯಾ ಹಾಗೂ ಕಝಾಕಿಸ್ತಾನ್ ನಂತ್ರ ಜುಲೈ ಮೊದಲ ವಾರದಲ್ಲಿ ಮೋದಿ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. ಮೋದಿ ಇಸ್ರೇಲ್ ಗೆ ಭೇಟಿ ನೀಡಿದಲ್ಲಿ ಇಸ್ರೇಲ್ ಪ್ರವಾಸ ಕೈಗೊಂಡ ಭಾರತದ ಮೊದಲ ಪ್ರಧಾನ ಮಂತ್ರಿಯಾಗಲಿದ್ದಾರೆ. ಇಸ್ರೇಲ್ ನಲ್ಲಿ ಭಾರತೀಯರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ನಂತ್ರ ಜರ್ಮನಿ, ಚೀನಾ, ಕೆನಡಾಗಳಿಗೆ ಭೇಟಿ ನೀಡಲಿದ್ದಾರೆ ಮೋದಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...