alex Certify
ಕನ್ನಡ ದುನಿಯಾ       Mobile App
       

Kannada Duniya

ಅಡ್ವಾಣಿ ಕಣಕ್ಕಿಳಿಸಲು ಮೋದಿ ಮಾಸ್ಟರ್ ಪ್ಲಾನ್

ಬಿಜೆಪಿ ತನ್ನ ಸಂಸದರು ಹಾಗೂ ಶಾಸಕರಿಗೆ ವಿಧಿಸಿದ್ದ ವಯಸ್ಸಿನ ನಿರ್ಬಂಧವನ್ನು ಸಡಿಲಗೊಳಿಸಲು ನಿರ್ಧರಿಸಿದೆ. 2019ರ ಲೋಕಸಭಾ ಚುನಾವಣೆಗೆ ಹಿರಿಯ ನಾಯಕರನ್ನು ಸ್ಪರ್ಧೆಗಿಳಿಸಲು ಮುಂದಾಗಿದೆ. ವರದಿಯೊಂದರ ಪ್ರಕಾರ ಲಾಲ್ ಕೃಷ್ಣ ಅಡ್ವಾಣಿಯವರನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ ಸೇರಿದಂತೆ ಹಿರಿಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ಹೇಳಿವೆ. ದೆಹಲಿಯಲ್ಲಿರುವ 90 ವರ್ಷದ ಅಡ್ವಾನಿ ಮನೆಗೆ ಭೇಟಿ ನೀಡಿದ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಈ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಅಡ್ವಾಣಿ ಗುಜರಾತಿನ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಡ್ವಾಣಿ ಹಾಗೂ ಜೋಶಿಯವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲೂ ಸ್ಥಾನ ನೀಡಿರಲಿಲ್ಲ. ಮಾರ್ಗದರ್ಶಿ ತಂಡದಲ್ಲಿ ಅವ್ರಿಗೆ ಸ್ಥಾನ ನೀಡಲಾಗಿತ್ತು. ಲೋಕಸಭೆ ಚುನಾವಣೆಯಲ್ಲಿ ಗೆಲುವು ಮುಖ್ಯವಾಗಿದೆ. ವಯಸ್ಸಿನ ಬದಲು ಗೆಲುವು ತಂದುಕೊಡುವ ಅಭ್ಯರ್ಥಿಗಳಿಗೆ ಸ್ಥಾನ ನೀಡಬೇಕೆಂಬುದು ಬಿಜೆಪಿ ರಣತಂತ್ರವಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...