alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ಚುನಾವಣೆಗೆ ಮೋದಿ ತಯಾರಿ

pm-modi-gujarat_650x400_71490338705

ಇವತ್ತು ಗುಜರಾತ್ ಮತ್ತು ರಾಜಸ್ತಾನದ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ರು. ಡಿಸೆಂಬರ್ ನಲ್ಲಿ ಗುಜರಾತ್ ಚುನಾವಣೆ ನಡೆಯಲಿದ್ದು ಈ ಕುರಿತಂತೆ ಸಂಸದರ ಜೊತೆ ಮೋದಿ ಚರ್ಚೆ ನಡೆಸಿದ್ದಾರೆ.

ನಿನ್ನೆ ಉತ್ತರಪ್ರದೇಶದ ಸಂಸದರೆಲ್ಲ ಪ್ರಧಾನಿಯನ್ನು ಭೇಟಿ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ಗೆಲುವಿನ ಸಂಭ್ರಮ ಹಂಚಿಕೊಂಡಿದ್ದರು. ಈ ವೇಳೆ ಸಂಸದರಿಗೆ ಕಿವಿಮಾತು ಹೇಳಿದ ಮೋದಿ ಹಾಗೂ ಅಮಿತ್ ಶಾ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚಿಸಿದ್ರು. ಜೊತೆಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಮೂಗು ತೂರಿಸದಂತೆ ಕಟ್ಟಪ್ಪಣೆ ಮಾಡಿದ್ದರು.

ಕಳೆದ 19 ವರ್ಷಗಳಿಂದ ಗುಜರಾತ್ ನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಈ ಬಾರಿ 182 ಕ್ಷೇತ್ರಗಳ ಪೈಕಿ 150 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ಸದ್ಯ ಬಿಜೆಪಿ 123 ಕ್ಷೇತ್ರಗಳನ್ನು ಹೊಂದಿದೆ. ಗುಜರಾತ್ ನ ಗಾಂಧಿನಗರ ಕ್ಷೇತ್ರದ ಸಂಸದರಾಗಿರುವ ಎಲ್.ಕೆ.ಅಡ್ವಾಣಿ ಕೂಡ ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದರು. ಸಚಿವೆ ಸ್ಮೃತಿ ಇರಾನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಹಾಜರಿದ್ದರು. ಈ ತಿಂಗಳಾಂತ್ಯಕ್ಕೆ ಮೋದಿ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಮೋದಿ ತವರು ಗುಜರಾತ್ ನಲ್ಲಿ ಆಮ್ ಆದ್ಮಿ ನಾಯಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರ ಶುರುಮಾಡಿದ್ದಾರೆ. ಬಿಜೆಪಿಗೆ ಪೈಪೋಟಿ ನೀಡಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಆದ್ರೆ ಪಂಜಾಬ್ ಚುನಾವಣೆಯಲ್ಲಿ ಎಎಪಿಯ ಹೀನಾಯ ಸೋಲು ಕೇಜ್ರಿವಾಲ್ ಅವರಿಗೆ ಹಿನ್ನಡೆ ಉಂಟುಮಾಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...