alex Certify
ಕನ್ನಡ ದುನಿಯಾ       Mobile App
       

Kannada Duniya

ಹವಾಮಾನ ವೈಪರೀತ್ಯ; ಜೈಪುರದಲ್ಲಿಳಿದ ಪ್ರಧಾನಿ ವಿಮಾನ

narendra-modi 5678ಭಾನುವಾರದಂದು ಕರ್ನಾಟಕಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಲ್ಲಿ ನಡೆದ ‘ವಿಕಾಸ ಪರ್ವ’ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿಯವರು, ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ದಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಭಾರತೀಯ ಜನತಾ ಪಕ್ಷ ಮಾತ್ರವಲ್ಲ ಇಡೀ ದೇಶದ ಜನತೆ ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಹಂಬಲಿಸುತ್ತಿದೆ ಎಂದು ಹೇಳಿದ ಅವರು, ಈಗಾಗಲೇ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಿರಿ ಎಂದು ಕರೆ ನೀಡಿದರು.

ಸಮಾವೇಶದ ಬಳಿಕ ನರೇಂದ್ರ ಮೋದಿಯವರು ನವದೆಹಲಿಗೆ ಹೊರಟಿದ್ದರಾದರೂ ಅಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದ ಕಾರಣ ಪ್ರಧಾನಿಯವರ ವಿಮಾನವನ್ನು ರಾಜಸ್ಥಾನದ ಜೈಪುರದಲ್ಲಿ ಲ್ಯಾಂಡ್ ಮಾಡಲಾಯಿತು. ದೆಹಲಿಯಲ್ಲಿ ಭಾರೀ ಗಾಳಿ ಎದ್ದಿದ್ದ ಕಾರಣ ಹವಾಮಾನ ತಿಳಿಯಾಗುವವರೆಗೂ 2 ಗಂಟೆಗಳ ಕಾಲ ಜೈಪುರದಲ್ಲಿಯೇ ಇದ್ದ ನರೇಂದ್ರ ಮೋದಿಯವರು ಬಳಿಕ ನವದೆಹಲಿಗೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...