alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಚಾಲನೆ

ಕೇಂದ್ರದ ಬಹು ನಿರೀಕ್ಷಿತ ಆರೋಗ್ಯ ವಿಮಾ ಯೋಜನೆಯಾದ ಆಯುಷ್ಮಾನ್ ಭಾರತ- ರಾಷ್ಟ್ರೀಯ ಆರೋಗ್ಯ ರಕ್ಷಣಾ ಮಿಶನ್ (ಎಬಿ- ಎನ್ಎಚ್‌ಪಿಎಂ)ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಜಾರ್ಖಂಡ್‌ನಲ್ಲಿ ಚಾಲನೆ ನೀಡಲಿದ್ದಾರೆ.

ಈ ಯೋಜನೆಯು ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂ. ವಿಮಾ ಕವರೇಜ್ ಒದಗಿಸಲಿದ್ದು, ದೇಶದ 10 ಕೋಟಿ ಬಡ ಕುಟುಂಬಗಳಿಗೆ ಪ್ರಯೋಜನ ಒದಗಿಸುವ ಗುರಿ ಇದೆ. ಈ ಯೋಜನೆಗೆ ಸೇರ್ಪಡೆಯಾಗಲು ಕುಟುಂಬ ಸದಸ್ಯರಿಗೆ ಮಿತಿ ಇಲ್ಲ. ಯಾರೊಬ್ಬರೂ ವಿಮಾ ಸೌಲಭ್ಯದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ.

ಸರ್ಕಾರಿ ಹಾಗೂ ನಿಗದಿಪಡಿಸಿದ ಖಾಸಗಿ ಆಸ್ಪತ್ರೆಗಳಲ್ಲಿ ಜನರು ಸೌಲಭ್ಯ ಪಡೆಯಬಹುದಾಗಿದೆ. ವಿಶ್ವದಲ್ಲೇ ಅತಿ ದೊಡ್ಡ ಸರ್ಕಾರಿ ಆರೋಗ್ಯ ಸೇವಾ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆದಿರುವ ‘ಆಯುಷ್ಮಾನ್ ಭಾರತ’ ಕ್ಕೆ ಶೇ.60 ರಷ್ಟು ಕೇಂದ್ರ ಸರ್ಕಾರ ಅನುದಾನ ನೀಡಲಿದ್ದರೆ, ಉಳಿದ ಶೇ.40 ರಷ್ಟನ್ನು ಆಯಾ ರಾಜ್ಯ ಸರ್ಕಾರಗಳು ಭರಿಸಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...