alex Certify
ಕನ್ನಡ ದುನಿಯಾ       Mobile App
       

Kannada Duniya

”ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಪೋರ್ನ್ ಕಾರಣ”

ದಿನೇ ದಿನೇ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಪೋರ್ನೋಗ್ರಫಿಯೇ ಪ್ರಮುಖ ಕಾರಣ ಅಂತಾ ಮಧ್ಯಪ್ರದೇಶದ ಗೃಹಸಚಿವ ಭೂಪೇಂದ್ರ ಸಿಂಗ್ ಹೇಳಿದ್ದಾರೆ. ಎಲ್ಲಾ ಪೋರ್ನ್ ಸೈಟ್ ಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಾಗ್ಲೇ ಮಧ್ಯಪ್ರದೇಶದ ಬಿಜೆಪಿ ಸರ್ಕಾರ 25 ಪೋರ್ನ್ ಸೈಟ್ ಗಳನ್ನು ನಿಷೇಧಿಸಿದೆ. ಮಕ್ಕಳ ಬಾಲ್ಯದ ಮೇಲೆ ಪೋರ್ನೋಗ್ರಫಿ ಪರಿಣಾಮ ಬೀರುತ್ತಿದೆ. ಈ ಸೈಟ್ ಗಳಿಗೆ ಸುಲಭ ಆ್ಯಕ್ಸೆಸ್ ಸಿಗುತ್ತಿರುವುದರಿಂದ್ಲೇ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಅಂತಾ ಹೇಳಿದ್ದಾರೆ.

ಈ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವಾಲಯ ಅಧ್ಯಯನ ಕೂಡ ನಡೆಸಿದೆಯಂತೆ. ಹಾಗಾಗಿ ಪೋರ್ನ್ ನಿಯಂತ್ರಣಕ್ಕೆ ಕಠಿಣ ಕಾನೂನು ಜಾರಿ ಮಾಡುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರ ಜೊತೆಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಅಭಿಯಾನ ಹಮ್ಮಿಕೊಳ್ಳಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...