alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಚೆ ಸೇವಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಅಂಚೆ ಸೇವಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಅಂಚೆ ಸೇವಕರ ಮೂಲ ವೇತನವನ್ನು 14,500 ರೂ. ಗಳವರೆಗೆ ಹೆಚ್ಚಿಸಲು ಸಚಿವ ಸಂಪುಟ ನಿರ್ಧರಿಸಿದೆ.

ವೇತನ ಏರಿಕೆ 2016 ರ ಜನವರಿ 1ರಿಂದಲೇ ಪೂರ್ವಾನ್ವಯವಾಗಲಿದ್ದು, ವೇತನದ ಜೊತೆಗೆ ಇತರೆ ಭತ್ಯೆಗಳು ದೊರೆಯಲಿದೆ. ಅಲ್ಲದೇ ತುಟ್ಟಿಭತ್ಯೆಯನ್ನು ಪ್ರತ್ಯೇಕವಾಗಿ ನೀಡಲಾಗುತ್ತದೆ.

ಗ್ರಾಮೀಣ ಅಂಚೆ ಸೇವಕರ ವೇತನವನ್ನು ತಿಂಗಳಿಗೆ ಕನಿಷ್ಠ 10 ಸಾವಿರ ರೂ. ಮತ್ತು ಗರಿಷ್ಠ 35,480 ರೂ. ಗಳಿಗೆ ಏರಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸುಮಾರು 1.6 ಲಕ್ಷ ಗ್ರಾಮೀಣ ಅಂಚೆ ಸೇವಕರಿಗೆ ಪ್ರಯೋಜನ ದೊರೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...