alex Certify
ಕನ್ನಡ ದುನಿಯಾ       Mobile App
       

Kannada Duniya

ವಿವಾದಕ್ಕೆ ಕಾರಣವಾಯ್ತು ‘ಆದಿತ್ಯನಾಥ್ ಆಂಜನೇಯ’ ಪೋಸ್ಟರ್

adityanath

ಗೋರಖ್ ಪುರ: ಬಿ.ಜೆ.ಪಿ.ಯ ಫೈರ್ ಬಾಂಡ್ ಎಂದೇ ಹೇಳಲಾಗುವ, ಸಂಸತ್ ಸದಸ್ಯ ಯೋಗಿ ಆದಿತ್ಯನಾಥ್ ಅವರನ್ನು ಆಂಜನೇಯನ ರೀತಿ ಚಿತ್ರಿಸಲಾಗಿರುವ ಪೋಸ್ಟರ್ ಭಾರೀ ವಿವಾದಕ್ಕೆ ಕಾರಣವಾಗಿದೆ. ಪಕ್ಷದ ಅಲ್ಪಸಂಖ್ಯಾತರ ಘಟಕ ಈ ಪೋಸ್ಟರ್ ಸಿದ್ಧಪಡಿಸಿದೆ ಎನ್ನಲಾಗಿದೆ.

ಯೋಗಿ ಆದಿತ್ಯನಾಥ್ ಅವರನ್ನು ಆಂಜನೇಯನ ರೀತಿ ಚಿತ್ರಿಸಲಾಗಿದ್ದು, ಕೈಯಲ್ಲಿ ಅಯೋಧ್ಯೆ ಶ್ರೀರಾಮನ ದೇವಾಲಯ ಹೊತ್ತುಕೊಂಡಿರುವಂತೆ ಚಿತ್ರಿಸಲಾಗಿದೆ. 2017ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದನ್ನು ಗಮದಲ್ಲಿಟ್ಟುಕೊಂಡೇ ರಂಜಾನ್ ಹಬ್ಬದ ಸಂದರ್ಭದಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ.

ಮಿಶನ್ 2017 ಹೆಸರಿನಲ್ಲಿ ಪೋಸ್ಟರ್ ರಿಲೀಸ್ ಮಾಡಲಾಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಮುಸಲ್ಮಾನರು ಸಹಕಾರ ನೀಡಬೇಕೆಂದು ಕೋರಲಾಗಿದೆ. ಈ ಬಗ್ಗೆ ಬಿ.ಜೆ.ಪಿ. ನಾಯಕರು ಮೌನ ವಹಿಸಿದ್ದರೆ, ಬಹುಜನ ಸಮಾಜ ಪಕ್ಷ, ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಟೀಕಿಸಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...