alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಆರ್.ಎಸ್.ಎಸ್.ನ ಆಯ್ಕೆ ಯಾರಂತೆ ಗೊತ್ತಾ?

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಾರದಿದ್ದರೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಆರ್.ಎಸ್.ಎಸ್. ನ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಶಿವಸೇನಾ ಮುಖವಾಣಿ ‘ಸಾಮ್ನಾ’ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.

ದೆಹಲಿಯಲ್ಲಿ ನಡೆಯುತ್ತಿರುವ ಊಹಾಪೋಹದ ಪ್ರಕಾರ, ಈ ಕಾರಣಕ್ಕೆ ಪ್ರಣಬ್ ಮುಖರ್ಜಿಯವರನ್ನು ಆರ್.ಎಸ್.ಎಸ್. ನಾಗಪುರದ ತನ್ನ ಮುಖ್ಯ ಕಚೇರಿಯಲ್ಲಿ ಭಾಷಣಕ್ಕೆ ಆಹ್ವಾನಿಸಿತ್ತು ಎಂದು ತಿಳಿಸಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಿವಸೇನಾ ವಕ್ತಾರ ಸಂಜಯ್ ರಾವತ್, “ಆರ್.ಎಸ್.ಎಸ್. ಈ ನಿಟ್ಟಿನಲ್ಲಿ ಈಗಾಗಲೇ ಆಲೋಚನೆ ನಡೆಸಿದ್ದು, ಬಿಜೆಪಿಗೆ ಬಹುಮತ ಬಾರದೆ ಇದ್ದರೆ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಹೆಸರಿಸುವ ಸಾಧ್ಯತೆ ಇದೆ” ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...