alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಾಗಪುರ ತಲುಪಿದ ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ನಾಳೆ ನಾಗಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ‘ಸಂಘ ಶಿಕ್ಷಾ ವರ್ಗ’ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ನಾಗಪುರ ತಲುಪಿರುವ ಪ್ರಣಬ್ ಮುಖರ್ಜಿ, ಈ ವಿಚಾರಕ್ಕೆ ಕಳೆದ ಎರಡು ದಿನಗಳಿಂದ ಭಾರೀ ಚರ್ಚೆಗೆ ಗುರಿಯಾಗಿದ್ದಾರೆ.

ಆದರೆ ಕಾಂಗ್ರೆಸ್ ಮುಖಂಡರು ತಮ್ಮ ಈ ಹಿಂದಿನ ಹೇಳಿಕೆ ಬದಲಾಯಿಸಿದ್ದು, ಪ್ರಣಬ್ ಮುಖರ್ಜಿ ಅವರು ಓರ್ವ ಜಾತ್ಯಾತೀತ ವ್ಯಕ್ತಿ. ಅವರಿಂದ ಆರ್.ಎಸ್.ಎಸ್. ನಲ್ಲಿ ಕೊಂಚ ಸುಧಾರಣೆ ಆಗಬಹುದು ಎಂದು ತಿಳಿಸಿದ್ದಾರೆ.

ಇದರ ಮಧ್ಯೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಹಣಕಾಸು ಸಚಿವ ಚಿದಂಬರಂ, ಪ್ರಣಬ್ ಮುಖರ್ಜಿ ಈ ಆಹ್ವಾನವನ್ನು ಸ್ವೀಕರಿಸಿದ್ದು ಉತ್ತಮ ಯೋಚನೆ. ಆರ್ ಎಸ್ ಎಸ್ ಬಗೆಗಿನ ತಪ್ಪು ತಿಳುವಳಿಕೆಗಳ ಬಗ್ಗೆ ಪ್ರಣಬ್ ಮುಖರ್ಜಿ ಅರಿವು ಮೂಡಿಸುತ್ತಾರೆ ಎಂದಿದ್ದಾರೆ.

ಆದರೆ, ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಆಧಿರ್ ಚೌದರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ವಿ. ಹನುಮಂತ ರಾವ್, ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಗೆ ಹೋಗಬಾರದೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...