alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿಯಾಗಿ ಕೊನೆ ಭಾಷಣ ಮಾಡಲಿದ್ದಾರೆ ಪ್ರಣಬ್

president-pranab-mukherjee

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ನಿವೃತ್ತಿಯಾಗಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಅವರು ವೃತ್ತಿಯ ಕೊನೆಯ ದಿನ ಕಳೆಯಲಿದ್ದಾರೆ. ಸಂಜೆ ಪ್ರಣಬ್ ಮುಖರ್ಜಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಜುಲೈ 25, 2012ರಂದು ಪ್ರಣಬ್ ಮುಖರ್ಜಿ ರಾಷ್ಟ್ರದ 13 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಜುಲೈ 24, 2017ರಂದು ಅವರ ಅಧಿಕಾರಾವಧಿ ಮುಗಿಯಲಿದೆ. ಇಂದು ಸಂಜೆ 7.30 ಕ್ಕೆ ಪ್ರಣಬ್ ಮುಖರ್ಜಿ ವೃತ್ತಿ ಜೀವನದಲ್ಲಿ ಕೊನೆಯ ಬಾರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ವಿದಾಯದ ಔತಣಕೂಟವನ್ನು ಏರ್ಪಡಿಸಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಔತಣಕೂಟದಲ್ಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರದ ಸಚಿವರು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಇನ್ನೂ ಕೆಲ ನಾಯಕರು ಪಾಲ್ಗೊಳ್ಳಲಿದ್ದಾರೆ.

ಭಾನುವಾರ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಬೀಳ್ಕೊಡುಗೆ ಸಮಾರಂಭ ನಡೆದಿದೆ. ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತಿಯಾದ ನಂತ್ರ ಪ್ರಣಬ್ ಮುಖರ್ಜಿ 10ನೇ ರಾಜಾಜಿ ಮಾರ್ಗದ ನಿವಾಸದಲ್ಲಿ ವಾಸವಾಗಲಿದ್ದಾರೆ. ಈ ಹಿಂದೆ ಇಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ವಾಸವಾಗಿದ್ದರು. ಅವರ ನಿಧನದ ನಂತ್ರ ಕೇಂದ್ರ ಸಚಿವ ಮಹೇಶ್ ಶರ್ಮಾ ವಾಸವಾಗಿದ್ದರು. ಈಗ ಮಹೇಶ್ ಶರ್ಮಾ ನಿವಾಸ ಖಾಲಿ ಮಾಡಿದ್ದು ಪ್ರಣಬ್ ಇಲ್ಲಿ ವಾಸವಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...