alex Certify
ಕನ್ನಡ ದುನಿಯಾ       Mobile App
       

Kannada Duniya

ನೂತನ ರಾಜ್ಯಪಾಲರ ನೇಮಕ ಮಾಡಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ತಮಿಳುನಾಡು, ಬಿಹಾರ, ಮೇಘಾಲಯ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ಬನ್ವಾರಿಲಾಲ್ ಪುರೋಹಿತ್ ಅವರನ್ನು ತಮಿಳುನಾಡು ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಸತ್ಯಪಾಲ್ ಮಲಿಕ್ ಅವರನ್ನು ಬಿಹಾರ ರಾಜ್ಯಪಾಲರಾಗಿ ನಿಯೋಜಿಸಲಾಗಿದೆ.

ಅಸ್ಸಾಂ ರಾಜ್ಯಪಾಲರಾಗಿ ಜಗದೀಶ್ ಮುಖಿ, ಮೇಘಾಲಯಕ್ಕೆ ಗಂಗಾ ಪ್ರಸಾದ್ ಅವರನ್ನು ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.

ನಿವೃತ್ತ ಬ್ರಿಗೇಡಿಯರ್ ಬಿ.ಡಿ. ಮಿಶ್ರಾ ಅವರನ್ನು ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ನಿವೃತ್ತ ಅಡ್ಮಿರಲ್ ದೇವೇಂದ್ರ ಕುಮಾರ್ ಜೋಶಿ ಅವರು ಅಂಡಮಾನ್ ಮತ್ತು ನಿಕೊಬಾರ್ ದ್ವೀಪದ ಲೆ.ಗವರ್ನರ್ ಆಗಿ ನೇಮಕವಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...