alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಚುನಾವಣೆ: ಮೇ 26 ರಂದು ವಿರೋಧ ಪಕ್ಷಗಳ ಸಭೆ

opposition

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಜುಲೈ ತಿಂಗಳಿನಲ್ಲಿ ಮುಗಿಯಲಿದೆ. ಮುಂದಿನ ರಾಷ್ಟ್ರಪತಿ ಯಾರೆನ್ನುವ ಬಗ್ಗೆ ಈಗಾಗಲೇ ಚರ್ಚೆಯಾಗ್ತಾ ಇದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ರಾಷ್ಟ್ರಪತಿ ಆಯ್ಕೆಯನ್ನು ಗಂಭೀರವಾಗಿ ಪರಿಗಣಿಸಿವೆ. ಆಡಳಿತ ಪಕ್ಷ ಈ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಪ್ರಯತ್ನದಲ್ಲಿದೆ.

ಇತ್ತ ವಿರೋಧ ಪಕ್ಷ ಕೂಡ ಈ ಪ್ರಕ್ರಿಯೆಯಲ್ಲಿ ಹಿಂದೆ ಬಿದ್ದಿಲ್ಲ. ಸೋನಿಯಾ ಗಾಂಧಿ ನೇತೃತ್ವದಲ್ಲಿ ಮೇ 26ರಂದು ವಿಪಕ್ಷ ನಾಯಕರ ಸಭೆ ನಡೆಯಲಿದೆ. ಸಂಸತ್ ಭವನದ ಗ್ರಂಥಾಲಯದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಅಂತಿಮಗೊಳ್ಳುವ ಸಾಧ್ಯತೆ ಇದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಷ್ಟ್ರಪತಿಯಾಗಿರುವ ಪ್ರಣಬ್ ಮುಖರ್ಜಿಯವರನ್ನೇ ಇನ್ನೊಂದು ಬಾರಿ ಕಣಕ್ಕಿಳಿಸುವ ಪ್ರಸ್ತಾವವನ್ನು ನಿತೀಶ್ ಕುಮಾರ್ ಸೋನಿಯಾ ಮುಂದಿಟ್ಟಿದ್ದಾರೆ. ಇದು ಸೋನಿಯಾ ಗಾಂಧಿಯವರಿಗೂ ಒಪ್ಪಿಗೆಯಾಗಿದೆ ಎನ್ನಲಾಗ್ತಾ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...