alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಚುನಾವಣೆಗೆ ಡೇಟ್ ಫಿಕ್ಸ್

cunavne-rastrapti

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯುಕ್ತ ನಸೀಂ ಝೈದಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರದ ಅವಧಿ ಜುಲೈ 24 ಕ್ಕೆ ಮುಕ್ತಾಯವಾಗಲಿದೆ. ನೂತನ ರಾಷ್ಟ್ರಪತಿಗಳನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಜೂನ್ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂನ್ 28 ರಂದು ನಾಮಪತ್ರ ಪರಿಶೀಲನೆ, ಜುಲೈ 1 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಜುಲೈ 17 ರಂದು ಮತದಾನ, ಜುಲೈ 20 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಚುನಾಯಿತ ಸಂಸದರು, ಶಾಸಕರು ಮತ ಚಲಾವಣೆ ಮಾಡಲಿದ್ದಾರೆ. 776 ಸಂಸದರು, 4120 ಶಾಸಕರು ಮತ ಚಲಾವಣೆ ಮಾಡಲಿದ್ದಾರೆ. ಈಗಾಗಲೇ ನೂತನ ರಾಷ್ಟ್ರಪತಿ ಆಯ್ಕೆ ಕುರಿತಾಗಿ ಚರ್ಚೆ, ಸಮಾಲೋಚನೆ ನಡೆದಿದ್ದು, ಎನ್.ಡಿ.ಎ. ಮತ್ತು ಯು.ಪಿ.ಎ. ಕಾರ್ಯತಂತ್ರ ರೂಪಿಸಿವೆ.

ರಾಷ್ಟ್ರಪತಿ ಚುನಾವಣೆ ಮಾಹಿತಿ

ಜೂನ್ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಜೂನ್ 28 ನಾಮಪತ್ರ ಪರಿಶೀಲನೆ

ಜುಲೈ 1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ

ಜುಲೈ 17 ರಂದು ಮತದಾನ

ಜುಲೈ 20 ರಂದು ಮತ ಎಣಿಕೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...