alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಿಗಳಿಗೆ ಮರಣದಂಡನೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ನವದೆಹಲಿ: 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ಸೇರಿದಂತೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ನೀಡುವ ಸುಗ್ರಿವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ಇತ್ತೀಚೆಗೆ ಹೆಚ್ಚಾಗುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪೋಕ್ಸೋ ಕಾಯ್ದೆಗೆ ತಿದ್ದುಪಡಿ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಪೂರಕವಾದ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ.

ಸುಗ್ರೀವಾಜ್ಞೆ ಪ್ರಕಾರ, ಪೊಲೀಸರ ತನಿಖೆಗೆ 60 ದಿನ ಗಡುವು ನೀಡಲಾಗಿದ್ದು, 2 ತಿಂಗಳಲ್ಲಿ ಕೋರ್ಟ್ ವಿಚಾರಣೆ ಪೂರ್ಣಗೊಳಿಸಬೇಕಿದೆ. ಮೇಲ್ಮನವಿಯನ್ನು 6 ತಿಂಗಳೊಳಗೆ ಇತ್ಯರ್ಥಪಡಿಸಬೇಕಿದೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಇಲ್ಲ. ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...