alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರಪತಿ ಚುನಾವಣೆ: ಶಿವಸೇನೆ ಆಯ್ಕೆ ಬಗ್ಗೆ ಉದ್ಧವ್ ಜೊತೆ ಬಿಜೆಪಿ ಚರ್ಚೆ

u_ze99uh1

ರಾಷ್ಟ್ರಪತಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿದ್ದಾರೆ. ಭಾನುವಾರ ಉದ್ಧವ್ ಠಾಕ್ರೆ ಮನೆಯಲ್ಲಿ ಅಮಿತ್ ಶಾ ಮಾತುಕತೆ ನಡೆಸಿದ್ದಾರೆ. ನಾಯಕರಿಬ್ಬರೇ ಅರ್ಧ ಗಂಟೆ ಕಾಲ ಗುಪ್ತವಾಗಿ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

ಮೂರು ದಿನಗಳ ಮಹಾರಾಷ್ಟ್ರ ಪ್ರವಾಸದಲ್ಲಿರುವ ಅಮಿತ್ ಶಾ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜೊತೆ ಭಾನುವಾರ ಬೆಳಿಗ್ಗೆ ಮಾತೋಶ್ರೀ ನಿವಾಸಕ್ಕೆ ಭೇಟಿ ನೀಡಿದ್ದರು. ಶನಿವಾರ ಮಾತನಾಡಿದ್ದ ಅಮಿತ್ ಶಾ, ಸಹ ಪಕ್ಷಗಳ ಅಭಿಪ್ರಾಯವನ್ನು ಸಂಗ್ರಹಿಸಿ ನಂತ್ರ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುವುದಾಗಿ ಹೇಳಿದ್ದರು. ಉದ್ಧವ್ ಠಾಕ್ರೆ ಭೇಟಿಗೂ ಮೊದಲು ಶಾ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಸ್ವತಂತ್ರವಾಗಿರುವುದಾಗಿ ಶಿವಸೇನೆ ಈ ಮೊದಲೇ ಹೇಳಿಕೆ ನೀಡಿತ್ತು. ಈ ಹಿಂದೆ ಕೂಡ ಪ್ರತಿಭಾ ಪಾಟೀಲ್ ಹಾಗೂ ಪ್ರಣಬ್ ಮುಖರ್ಜಿಯನ್ನು ಶಿವಸೇನೆ ಬೆಂಬಲಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...