alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ನಾಯಕರಿಂದ ಸೋನಿಯಾ ಗಾಂಧಿ ಭೇಟಿ

presidentialರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಹಿರಿಯ ನಾಯಕರು ಹಾಗೂ ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್ ಹಾಗೂ ವೆಂಕಯ್ಯ ನಾಯ್ಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಒಮ್ಮತದ ಆಯ್ಕೆ ಕುರಿತಂತೆ ಈ ನಾಯಕರುಗಳು ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಿದ್ದು, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿಯವರನ್ನೂ ಭೇಟಿಯಾಗಲಿದ್ದಾರೆನ್ನಲಾಗಿದೆ.

ಜುಲೈ 25ರಂದು ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು, ಇದಕ್ಕೂ ಮುನ್ನ ಅಂದರೆ ಜುಲೈ 17ರಂದು ರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 28 ಕೊನೆಯ ದಿನವಾಗಿದೆ. ಸರ್ವಸಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಪ್ರತಿಪಕ್ಷ ನಾಯಕರನ್ನು ಬಿಜೆಪಿ ನಾಯಕರುಗಳು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...