alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್

togari

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ಬಡ, ಮಧ್ಯಮ ವರ್ಗದವರು ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ತೈಲ ಬೆಲೆಯಲ್ಲಿಯೂ ಏರಿಕೆಯಾಗಿದೆ. ಬೇಳೆ ಕಾಳುಗಳ ಬೆಲೆಯಲ್ಲೂ ಹೆಚ್ಚಳವಾಗಿದೆ.

ಉದ್ದಿನಬೇಳೆ ಪ್ರತಿ ಕೆಜಿಗೆ 220 ರೂಪಾಯಿಗೆ ಏರಿಕೆಯಾಗಿದೆ. ತೊಗರಿ ಬೇಳೆ ಕೆಜಿಗೆ 200 ರೂ. ಹಾಗೂ ಹೆಸರು ಬೇಳೆ ಕೆಜಿಗೆ 120 ರೂಪಾಯಿ ಬೆಲೆ ಇದ್ದು, ಮೊದಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಬೇಳೆ ಬೆಲೆ ಅಂಕೆಗೆ ಸಿಗದೇ ಏರಿಕೆಯಾಗಿದ್ದು, ತರಕಾರಿಗಳ ಬೆಲೆಯೂ ಹೆಚ್ಚಾಗಿ ಜನ ಹೈರಾಣಾಗಿದ್ದಾರೆ. ಈ ನಡುವೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ದ್ವಿದಳ ಧಾನ್ಯಗಳ ಮೇಲೆ ಮೌಲ್ಯವರ್ಧಿತ ತೆರಿಗೆ, ಮಾರುಕಟ್ಟೆ ಶುಲ್ಕ ಹಾಕಬಾರದೆಂದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಏನೆಲ್ಲಾ ಕ್ರಮ ಕೈಗೊಂಡಿದ್ದರೂ, ಅಂಕೆಗೆ ಸಿಗದೇ ದ್ವಿದಳ ಧಾನ್ಯಗಳ ಬೆಲೆಯಲ್ಲಿ ಹೆಚ್ಚಳವಾಗಿದೆ.

ಅಕ್ರಮ ದಾಸ್ತಾನುಗಾರರು ಕೂಡ ಬೆಲೆ ಹೆಚ್ಚಲು ಕಾರಣವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...