alex Certify
ಕನ್ನಡ ದುನಿಯಾ       Mobile App
       

Kannada Duniya

ದೀಪಾವಳಿ ಹಬ್ಬಕ್ಕೂ ಮುನ್ನವೇ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಕ್ತು ಗಿಫ್ಟ್

ಮಂಗಳವಾರದಂದು ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಆಶಾ ಕಾರ್ಯಕರ್ತೆಯರು ಹಾಗೂ ಎಎನ್ಎಂಗಳ ಜೊತೆ ಸಂವಾದ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದೇಶದ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಪ್ರಧಾನಿಯವರು ಸಿಹಿ ಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಮಾಸಿಕ ಗೌರವಧನ ಹೆಚ್ಚಿಸುವ ಹಾಗೂ ಆಶಾ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ನೀಡುವ ಪ್ರೋತ್ಸಾಹ ಧನವನ್ನು ದ್ವಿಗುಣಗೊಳಿಸುವ ಘೋಷಣೆ ಮಾಡಿದ್ದಾರೆ.

ಇದನ್ನು ದೀಪಾವಳಿಯ ಕೊಡುಗೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದು, ಈ ಹೆಚ್ಚಳ ಅಕ್ಟೋಬರ್ ತಿಂಗಳಿನಿಂದ ಜಾರಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...