alex Certify
ಕನ್ನಡ ದುನಿಯಾ       Mobile App
       

Kannada Duniya

‘ಮನ್ ಕಿ ಬಾತ್’ 43 ನೇ ಸಂಚಿಕೆಯಲ್ಲಿ ಮೋದಿ ಹೇಳಿದ್ದೇನು ಗೊತ್ತಾ…?

ಆಕಾಶವಾಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿ 43 ನೇ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ್ದು, ದೇಶ ಮತ್ತು ವಿಶ್ವದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಈ ಬಾರಿ ಕಾಮನ್ ವೆಲ್ತ್ ಗೇಮ್ ನಲ್ಲಿ ದೇಶದ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದ ಪ್ರಧಾನಿ, ಕ್ರೀಡಾಪಟುಗಳು ತಮ್ಮ ಸವಾಲುಗಳನ್ನು ಮೆಟ್ಟಿನಿಂತು ಅಮೋಘ ಸಾಧನೆ ಮಾಡಿದ್ದು, ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಫಿಟ್ ಇಂಡಿಯಾ ಚಳವಳಿ ಅಗತ್ಯವಾಗಿದೆ. ಪ್ರತಿಯೊಬ್ಬರು ಜೀವನ ಶೈಲಿಯನ್ನು ಬದಲಿಸಿಕೊಳ್ಳಬೇಕು. ಸದೃಢ ಆರೋಗ್ಯಯುತ ಜೀವನಕ್ಕೆ ಅಭ್ಯಾಸ ನಡೆಸಬೇಕು. ಫಿಟ್ ಇಂಡಿಯಾ ಚಳವಳಿ ನನ್ನ ಕನಸಾಗಿದೆ. ಇದಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಬರಲಿರುವ ಯೋಗ ದಿನಾಚರಣೆಯ ವೇಳೆಗೆ ಸದೃಢ ಆರೋಗ್ಯಯುತ ಜೀವನಶೈಲಿ ರೂಢಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

ಸ್ವಚ್ಛ ಭಾರತ ಅಭಿಯಾನಕ್ಕೆ ವಿದ್ಯಾರ್ಥಿಗಳು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಪ್ರಶಸ್ತಿ ನೀಡುವ ಮತ್ತು ಹೆಚ್ಚುವರಿ ಅಂಕ ನೀಡುವ ಚಿಂತನೆ ಇದೆ. ಅಲ್ಲದೇ ನೀರಿನ ಸಂರಕ್ಷಣೆಗೆ ಒತ್ತು ನೀಡಬೇಕೆಂದು ಪ್ರಧಾನಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...