alex Certify
ಕನ್ನಡ ದುನಿಯಾ       Mobile App
       

Kannada Duniya

ಹತ್ಯೆಯನ್ನು ಸಮರ್ಥಿಸಿ ಕೆಲಸ ಕಳೆದುಕೊಂಡ ಉದ್ಯೋಗಿ

ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ದೇಶಾದ್ಯಂತ ತೀವ್ರವಾಗಿ ಖಂಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಕ್ರೋಶದ ನುಡಿಗಳು ಕೇಳಿ ಬರುತ್ತಿವೆ.

ಇದರ ಮಧ್ಯೆ ಬ್ಯಾಂಕ್ ಉದ್ಯೋಗಿಯೊಬ್ಬ ಬಾಲಕಿ ಹತ್ಯೆಯನ್ನು ಸಮರ್ಥಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಕೆಲಸ ಕಳೆದುಕೊಂಡಿದ್ದಾನೆ. ಕೇರಳದ ಕೊಚ್ಚಿಯ ಕೋಟಕ್ ಮಹೀಂದ್ರಾ ಬ್ಯಾಂಕ್ ನ ಪಾಲರಿವಟ್ಟೂಂ ಶಾಖೆಯಲ್ಲಿ ಸಹಾಯಕ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಿಷ್ಣು ನಂದಕುಮಾರ್ ಕೆಲಸ ಕಳೆದುಕೊಂಡ ನೌಕರನಾಗಿದ್ದಾನೆ.

ಈತ, ತನ್ನ ಫೇಸ್ ಬುಕ್ ಪುಟದಲ್ಲಿ ‘ಆಕೆ ಹತ್ಯೆಯಾಗಿದ್ದೇ ಒಳ್ಳೆಯದಾಯಿತು. ಇಲ್ಲದಿದ್ದರೆ ಮುಂದೊಂದು ದಿನ ಭಾರತದ ವಿರುದ್ದ ಮಾನವ ಬಾಂಬ್ ಆಗಿ ಪರಿವರ್ತನೆಯಾಗುತ್ತಿದ್ದಳು’ ಎಂದು ಬರೆದುಕೊಂಡಿದ್ದು, ಈ ಪೋಸ್ಟ್ ಗೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಈತ ಕೆಲಸ ಮಾಡುತ್ತಿದ್ದ ಕೋಟಕ್ ಮಹೀಂದ್ರಾದ ಅಧಿಕೃತ ಫೇಸ್ ಬುಕ್ ಪೇಜ್ ಗೆ ಟ್ಯಾಗ್ ಮಾಡಿದ್ದು, ಆತನನ್ನು ಕೂಡಲೇ ಕೆಲಸದಿಂದ ಕಿತ್ತು ಹಾಕುವಂತೆ ಆಗ್ರಹಿಸಿದ್ದರು. ನೆಟ್ಟಿಗರ ಆಕ್ರೋಶಕ್ಕೆ ಮಣಿದ ಬ್ಯಾಂಕ್ ಹಿರಿಯ ಅಧಿಕಾರಿಗಳು ಆತನನ್ನು ಈಗ ಕೆಲಸದಿಂದ ಕಿತ್ತು ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...