alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಕಾರ್ಯಕರ್ತರಿಗೊಂದು ಸಿಹಿ ಸುದ್ದಿ

Priyanka-Gandhi-image

ಲಖ್ನೋ: ದೇಶದ ರಾಜಕೀಯದಲ್ಲಿ ಉತ್ತರಪ್ರದೇಶ ಮಹತ್ವದ ಪಾತ್ರ ವಹಿಸುತ್ತದೆ. ಅತಿಹೆಚ್ಚು ಲೋಕಸಭೆ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಗೆ ಮತ್ತೊಮ್ಮೆ ಆ ಸ್ಥಾನಕ್ಕೆ ಬರಲು ದಶಕವೇ ಕಳೆದಿದೆ.

ಕಾರ್ಯಕರ್ತರಲ್ಲಿಯೂ ಉತ್ಸಾಹ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್ ನಲ್ಲಿ ಮಿಂಚು ಹರಿಸಲು ಹೊಸ ಪ್ರಯೋಗಕ್ಕೆ ಕಾಂಗ್ರೆಸ್ ಮುಂದಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರ ರಚಿಸಬೇಕೆಂದು ಮನಗಂಡಿರುವ ಕಾಂಗ್ರೆಸ್ ನಾಯಕರು ಇದಕ್ಕಾಗಿ ಕಾರ್ಯತಂತ್ರ ರೂಪಿಸತೊಡಗಿದ್ದಾರೆ. ಪ್ರಿಯಾಂಕ ಗಾಂಧಿ ಅವರನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಮತ್ತೊಂದು ಸಂಗತಿ ಎಂದರೆ, ಚುನಾವಣೆಯ ಚಾಣಕ್ಯ ಎಂದೇ ಕರೆಯಲಾಗುವ ಪ್ರಶಾಂತ್ ಕಿಶೋರ್ ಅವರಿಗೆ, ಕಾಂಗ್ರೆಸ್ ಪರವಾಗಿ ಉತ್ತರಪ್ರದೇಶ ಚುನಾಣೆಯಲ್ಲಿ ಕೆಲಸ ಮಾಡುವಂತೆ ಕೋರಲಾಗಿದ್ದು, ಅವರೂ ಕೂಡ ಸಮ್ಮತಿಸಿದ್ದಾರೆ. ಪ್ರಶಾಂತ್ ಕಿಶೋರ್ ಹಾಗೂ ಪ್ರಿಯಾಂಕ ಗಾಂಧಿ ಅವರು ಉತ್ತರಪ್ರದೇಶ ಕಾಂಗ್ರೆಸ್ ಗೆ ಚೈತನ್ಯ ನೀಡಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...