alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಾಂಕಾ ಪ್ರಚಾರಕ್ಕೆ ಬಾರದ್ದಕ್ಕೆ ಸ್ಮೃತಿ ಇರಾನಿ ಟೀಕೆ

smriti

ಉತ್ತರಪ್ರದೇಶ ಚುನಾವಣಾ ಪ್ರಚಾರಕ್ಕೆ ಬಾರದ ಪ್ರಿಯಾಂಕಾ ಗಾಂಧಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. ಅಮೇಥಿಯಲ್ಲಿ ಜನರ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದೇ ಪ್ರಿಯಾಂಕಾ ಪ್ರಚಾರಕ್ಕೇ ಬಂದಿಲ್ಲ ಅಂತಾ ಹೇಳಿದ್ದಾರೆ. ಸಮಾವೇಶವೊಂದನ್ನು ಉದ್ದೇಶಿಸಿ ಸ್ಮೃತಿ ಮಾತನಾಡುತ್ತಿದ್ರು.

ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ನೀವು ಚುನಾವಣಾ ಅಭ್ಯರ್ಥಿಯಾಗುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ. ಬಿಜೆಪಿಯ ಪ್ರತಿ ಕಾರ್ಯಕರ್ತರು ಯುಪಿಯಲ್ಲಿ ಪಕ್ಷ ಗೆಲ್ಲಬೇಕೆಂದು ಬಯಸುತ್ತಿದ್ದಾರೆ ಎಂದ್ರು. 2014 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದರೂ ತಾವು ಅಮೇಥಿಯ ಜನರಿಗಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿರೋದಾಗಿ ತಿಳಿಸಿದ್ರು.

ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ, ಹಾಗಾಗಿ ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೇ ಬಂದಿಲ್ಲ ಅಂತಾ ಕಿಡಿಕಾರಿದ್ರು. ಜನರ ಸವಾಲುಗಳಿಂದ ತಪ್ಪಿಸಿಕೊಳ್ಳಲು ಪ್ರಿಯಾಂಕಾ ಬಯಸುತ್ತಿದ್ದಾರೆ ಎಂದ್ರು. ಅಖಿಲೇಶ್ ಯಾದವ್ ಅವರಿಗೆ ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುತ್ತೇನೆಂಬ ವಿಶ್ವಾಸವಿರಲಿಲ್ಲ ಹಾಗಾಗಿ ಕಾಂಗ್ರೆಸ್ ಕೈಹಿಡಿದಿದ್ದಾರೆ ಅಂತಾ ಅಭಿಪ್ರಾಯಪಟ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...