alex Certify
ಕನ್ನಡ ದುನಿಯಾ       Mobile App
       

Kannada Duniya

ಶುಕ್ರವಾರ ರಾಯ್ಬರೇಲಿಯಲ್ಲಿ ಪ್ರಿಯಾಂಕ ಪ್ರಚಾರ

priyanka_gandhi_750_1487258583_749x421

ಉತ್ತರ ಪ್ರದೇಶ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮೂರನೇ ಹಂತದ ಮತದಾನಕ್ಕೂ ಮೊದಲು ಪ್ರಿಯಾಂಕ ಗಾಂಧಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಸಹೋದರ ರಾಹುಲ್ ಗಾಂಧಿ ಜೊತೆ ರಾಯ್ಬರೇಲಿಯಲ್ಲಿ ಶುಕ್ರವಾರ ಪ್ರಿಯಾಂಕ ಪ್ರಚಾರ ನಡೆಸಲಿದ್ದಾರೆ.

ಫೆಬ್ರವರಿ 17 ರಂದು ರಾಹುಲ್ ಗಾಂಧಿ ರಾಯ್ಬರೇಲಿಯ ಎರಡು ಕಡೆ ಪ್ರಚಾರ ಸಭೆ ನಡೆಸಲಿದ್ದಾರೆ. ಮೂರು ಗಂಟೆಗೆ ಇಂಟರ್ ಕಾಲೇಜ್ ಮೈದಾನದಲ್ಲಿ ಸಭೆ ನಡೆಯಲಿದೆ. ನಾಲ್ಕು ಮೂವತ್ತಕ್ಕೆ ಮಹಾರಾಜಗಂಜ್ ನ ಬಾಬುರಿಯಾ ಮೈದಾನದಲ್ಲಿ ಪ್ರಚಾರ ನಡೆಸಲಿದ್ದಾರೆ. ರಾಹುಲ್ ಜೊತೆ ಪ್ರಿಯಾಂಕ ಗಾಂಧಿ ಕೂಡ ಪ್ರಚಾರ ನಡೆಸಲಿದ್ದಾರೆ.

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಿಯಾಂಕ ಹೆಸರಿತ್ತು. ಆದ್ರೆ ಪ್ರಿಯಾಂಕ ಮೊದಲ ಹಾಗೂ ಎರಡನೇ ಹಂತದ ಮತದಾನ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿಲ್ಲ. ಈಗ ರಾಯ್ಬರೇಲಿಯಲ್ಲಿ ಪ್ರಚಾರ ನಡೆಸಲಿದ್ದು, ನಂತ್ರ ಅಮೇಥಿಯಲ್ಲಿ ಮತಯಾಚನೆ ಮಾಡಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...