alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಉಗ್ರ ಹಫೀಜ್ ಬಿಡುಗಡೆಗೆ ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ

ಲಷ್ಕರ್ ಇ ತೊಯ್ಬಾ ಉಗ್ರ ಹಫೀಜ್ ಸಯೀದ್ ನನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಿರುವುದಕ್ಕೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ಕೆಲವರು ಸಂಭ್ರಮಾಚರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವ್ಪುರಿ ಏರಿಯಾದಲ್ಲಿರುವ ಬೇಗಂ ಬಾಘ್ ಕಾಲೋನಿಯ ಕೆಲವು ಮನೆಗಳನ್ನು ಹಸಿರು ಬಾವುಟಗಳಿಂದ ಅಲಂಕರಿಸಲಾಗಿತ್ತು. ಎಲ್ಲರೂ ಸೇರಿ ಹಫೀಜ್ ಸಯೀದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಅಂತಾ ಘೋಷಣೆ ಕೂಡ ಕೂಗಿದ್ದಾರೆ. ಕೂಡಲೇ ಈ ವಿಚಾರವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಆಕಾಶ್ ದೀಪ್ ಅವರ ಗಮನಕ್ಕೆ ತರಲಾಯ್ತು.

ಘಟನೆ ಬಳಿಕ ಕೆಲವು ಬಲಪಂಥೀಯ ಸಂಘಟನೆಗಳ ಸದಸ್ಯರು ಕೂಡ ಸ್ಥಳದಲ್ಲಿ ಜಮಾಯಿಸಿದ್ರು. ಹಾಗಾಗಿ ಪರಿಸ್ಥಿತಿ ಕೈಮೀರದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ಕಳುಹಿಸಿಕೊಡಲಾಯ್ತು. 20-25 ಯುವಕರ ಗುಂಪು ಪಾಕ್ ಪರ ಘೋಷಣೆ ಕೂಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ರೂ ಪೊಲೀಸರು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಂದ ಆದೇಶ ಬಂದ ಮೇಲೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮನೆಗಳಿಗೆ ಹಾಕಲಾಗಿದ್ದ ಹಸಿರು ಬಾವುಟಗಳನ್ನು ತೆರವು ಮಾಡಿದ್ದಾರೆ. ಯುವಕರ ರಾಷ್ಟ್ರದ್ರೋಹಿ ಕೃತ್ಯದ ವಿಡಿಯೋ ರೆಕಾರ್ಡಿಂಗ್ ಕೂಡ ಇದೆ ಅಂತಾ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...